11:54 PM Friday19 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಕರ್ತವ್ಯಗಳ ಪಾಲನೆ ಮನೆಯಿಂದಲೇ ಆರಂಭವಾಗಲಿ: ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ

30/10/2022, 00:03

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಕರ್ತವ್ಯಗಳ ಪಾಲನೆ ಮನೆಯಿಂದಲೇ ಆರಂಭ ಆಗಬೇಕು. ಸಮಾಜದಲ್ಲಿ ಆಗುವ ತಪ್ಪುಗಳ ಬಗ್ಗೆ ಧ್ವನಿ ಎತ್ತುವ ಮನೋಭಾವವನ್ನು ಯುವಜನರು ಹೊಂದಿರಬೇಕು. ಪ್ರಾಥಮಿಕ ಹಂತದಿಂದಲೇ ಇಂತಹ ವಿಚಾರಗಳನ್ನು ಕಲಿಸುವ ಮತ್ತು ಅರಿಯುವ ಪ್ರಕ್ರಿಯೆ ಆದಾಗ ಎಲ್ಲರೂ ಸಮಾನರೆಂಬ ಮನೋಭಾವ ಹುಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ. ಅಭಿಪ್ರಾಯಪಟ್ಟರು.

ಅವರು ಶನಿವಾರ ನಗರದ ರೋಶನಿ ನಿಲಯ ಸಭಾಂಗಣದಲ್ಲಿ ಯುವಜನ ಮುನ್ನಡೆ- ಸಂವಾದ ಯುವಜನ ಸಂಪನ್ಮೂಲ ಕೇಂದ್ರದಿಂದ ಆಯೋಜಿಸಲಾದ ಯುವಜನ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಎಲ್ಲರೂ ಸಮಾನರೆಂಬ ಮನಸ್ಥಿತಿ ನಾವು ಬೆಳೆಸಿಕೊಂಡಾಗ ದೇಶಾಭಿಮಾನ ಬೆಳೆಸಿ ಕೊಳ್ಳಲು ಸಾಧ್ಯ ಎಂದು ಕರ್ತವ್ಯ ಪಾಲನೆಗಾಗಿ ಯುವಜನರ ಅಭಿವ್ಯಕ್ತಿ ಎಂಬ ವಿಚಾರದಲ್ಲಿ ಮಾತನಾಡಿದ ಅವರು ನುಡಿದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ಪತ್ರಕರ್ತ ತಾರನಾಥ ಗಟ್ಟಿ ಮಾತನಾಡಿ, ಕರಾವಳಿಯಲ್ಲಿ ನಾವು ಹಿಂದೆ ಕಾಣುತ್ತಿದ್ದ ಭಾತೃತ್ವ, ಸೌಹಾರ್ದತೆ ದೂರವಾಗಿದೆ. ಊರು ಮಾತ್ರವಲ್ಲದೆ, ಕಾಲೇಜು ಕ್ಯಾಂಪಸ್‌ನಲ್ಲಿಯೂ ಮನಸ್ಸುಗಳ ನಡುವೆ ಕಂದಕವೇರ್ಪಟ್ಟಿದೆ. ಈ ಬಗ್ಗೆ ಯುವಜನತೆ ಅರಿತುಕೊಂಡು ತಮ್ಮ ಕರ್ತವ್ಯ ಪಾಲನೆಯನ್ನು ನಿರ್ವಹಿಸಬೇಕಾಗಿದೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು