10:01 PM Monday3 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:…

ಇತ್ತೀಚಿನ ಸುದ್ದಿ

ಕರುಗಳ ವಧೆಗೆ ಸಿದ್ಧತೆ: ಪೊಲೀಸ್ ಹಾಗೂ ಪಾಲಿಕೆ ಅಧಿಕಾರಿಗಳಿಂದ ದಾಳಿ; 2 ಕರು ವಶಕ್ಕೆ, ಆರೋಪಿಗಳು ಪರಾರಿ

21/07/2021, 18:36


ಮಂಗಳೂರು(reporterkarnataka new)
:

ಕುದ್ರೋಳಿ ಕಸಾಯಿಖಾನೆ ಬಳಿಯ ಖಾಸಗಿ ಕಟ್ಟಡದಲ್ಲಿ ಅಕ್ರಮವಾಗಿ ಗೋವುಗಳನ್ನು ಕಡಿಯಲು ಸಿದ್ಧತೆ ನಡೆಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಧೆಗೆ ಸಿದ್ಧತೆ ಮಾಡಿದ್ದ ಎರಡು ಅಪ್ರಾಪ್ತ ವಯಸ್ಸಿನ ಕರುಗಳನ್ನು ಪತ್ತೆ ಮಾಡಿದ್ದಾರೆ.


ಕರುಗಳನ್ನು ವಶಕ್ಕೆ ಪಡೆದಿದ್ದು ಕೊಣಾಜೆಯ ಪಜೀರಿನಲ್ಲಿರುವ ಗೋವನಿತಾಶ್ರಮ ಗೋಶಾಲೆಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ಮನೆ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಕುದ್ರೋಳಿ ಕಸಾಯಿಖಾನೆಯಲ್ಲಿ ಕರು ಸೇರಿದಂತೆ ಅಪ್ರಾಪ್ತ ವಯಸ್ಸಿನ ಗೋವುಗಳನ್ನು ಕಡಿಯುತ್ತಿರುವ ಬಗ್ಗೆ ಮಾಹಿತಿ ಪಡೆದು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. 2020ರಲ್ಲಿ ಜಾರಿಗೆ ತಂದಿರುವ ನೂತನ ಕಾಯ್ದೆ ಪ್ರಕಾರ, ಅಪ್ರಾಪ್ತ ವಯಸ್ಸಿನ ಗೋವುಗಳನ್ನು ವಧೆ ಮಾಡುವುದು ಅಪರಾಧವಾಗಿದ್ದರಿಂದ ಕುದ್ರೋಳಿ ಕಸಾಯಿಖಾನೆಯ ಗುತ್ತಿಗೆ ಪಡೆದವರ ಲೈಸನ್ಸ್ ರದ್ದು ಮಾಡಲಾಗಿತ್ತು. ಅಲ್ಲದೆ, ವಧಾ ಗೃಹದ ಆವರಣದಲ್ಲಿ ಸಿಸಿಟಿವಿಯನ್ನೂ ಅಳವಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಕುದ್ರೋಳಿ ಕಸಾಯಿಖಾನೆಯಲ್ಲಿ ಗೋವುಗಳನ್ನು ಕಡಿಯಲಾಗಿಲ್ಲ ಎನ್ನುವ ಮಾಹಿತಿಯನ್ನು ಮೇಯರ್‌ ನೀಡಿದ್ದಾರೆ. ಅಲ್ಲದೆ, ಇಂದು ದಾಳಿ ನಡೆದಿರುವ ಜಾಗ ಅಲ್ಲಿಯೇ ಪಕ್ಕದ ಖಾಸಗಿ ಜಾಗ, ಆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದಿದ್ದಾರೆ. ಕಸಾಯಿಖಾನೆಯ ಪಕ್ಕದಲ್ಲೇ ಬೇರೊಂದು ಕಟ್ಟಡದಲ್ಲಿ ಕರುಗಳನ್ನು ವಧೆ ಮಾಡುತ್ತಿರುವ ಬಗ್ಗೆ ಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇಂದು ಬಕ್ರೀದ್ ಹಿನ್ನೆಲೆಯಲ್ಲಿ ಕಸಾಯಿಖಾನೆ ನಡೆಸುತ್ತಿದ್ದವರೇ ಕರುಗಳನ್ನು ಕಡಿಯಲು ಸಿದ್ಧತೆ ನಡೆಸಿದ್ದರು ಎಂದು ಬಜರಂಗದಳ ಕಾರ್ಯಕರ್ತರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು