ಇತ್ತೀಚಿನ ಸುದ್ದಿ
ಕರಾವಳಿ ಪ್ರಜಾಧ್ವನಿ ಯಾತ್ರೆಗೆ ನೆಲ್ಯಾಡಿಯಲ್ಲಿ ಚಾಲನೆ: ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಸಾಥ್
05/02/2023, 14:58

ಸುಳ್ಯ(reporterkarnataka.com): ಪ್ರಜಾಧ್ವನಿ ಯಾತ್ರೆಯ ಯಶ್ವಸ್ವಿನಿಂದ ಉತ್ತೇಜನಗೊಂಡ ರಾಜ್ಯ ಕಾಂಗ್ರೆಸ್ ಆರಂಭಿಸಿದ ಕರಾವಳಿ ಪ್ರಜಾಧ್ವನಿ ಯಾತ್ರೆಗೆ ಭಾನುವಾರ ಚಾಲನೆ ನೀಡಲಾಯಿತು. ಜಿಲ್ಲೆಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಕಡಬ ಬ್ಲಾಕಿನ ವ್ಯಾಪ್ತಿಯಲ್ಲಿ ಬರುವ ನೆಲ್ಯಾಡಿ ಯಲ್ಲಿ ಐತಿಹಾಸಿಕ ಯಾತ್ರೆಯ ಉದ್ಘಾಟನಾ ಸಮಾರಂಭ ನಡೆಯಿತು.
ಯಾತ್ರೆಯಲ್ಲಿ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ , ಮಾಜಿ ಸಚಿವ ಆರ್.ವಿ. ದೇಶ್ ಪಾಂಡೆ, ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹಮದ್, ಕೆಪಿಸಿಸಿ ಹಿಂದುಳಿದ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ, ದ.ಕ. ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು , ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.