5:01 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಖಾಸಗಿ ಬಸ್‌ಗಳಿಗೆ ಇನ್ನು ಮುಂದೆ ಡೋರ್ ಕಡ್ಡಾಯ: ಪೊಲೀಸ್ ಕಮೀಷನರ್ ಕುಲ್‌ದೀಪ್ ಕುಮಾರ್ ಜೈನ್ ಆದೇಶ

31/08/2023, 10:55

ಮಂಗಳೂರು(reporterkarnataka.com): ಇನ್ನು ಮುಂದೆ ಖಾಸಗಿ ಬಸ್ ಗಳಿಗೆ ಡೋರ್ ಕಡ್ಡಾಯವಾಗಲಿದೆ. ಮಂಗಳೂರು ಪೊಲೀಸ್ ಕಮೀಷನರ್ ಕುಲ್‌ದೀಪ್ ಕುಮಾರ್ ಜೈನ್ ಈ ಕುರಿತು ಆದೇಶ ಹೊರಡಿಸಿದ್ದಾರೆ.
ನಗರದ ನಂತೂರಿನಲ್ಲಿ ಖಾಸಗಿ ಸಿಟಿ ಬಸ್ ನಿಂದ ರಸ್ತೆಗೆ ಎಸೆಯಲ್ಪಟ್ಟು ಬಸ್ಸಿನ ನಿರ್ವಾಹಕ ನಿಧನವಾದ ಹಿನ್ನಲೆಯಲ್ಲಿ ಎಲ್ಲಾ ಖಾಸಗಿ ಬಸ್‌ಗಳಿಗೆ ಇನ್ನು ಡೋರ್ ಕಡ್ಡಾಯವಾಗಿದೆ ಎಂದು ಪೊಲೀಸ್ ಕಮೀಷನರ್ ಆದೇಶ ನೀಡಿದ್ದಾರೆ.
ಕಂಡಕ್ಟರ್ ಸೇರಿ ಯಾರು ಕೂಡಾ ಫುಟ್‌ಬೋರ್ಡ್‌ನಲ್ಲಿ ನಿಲ್ಲುವಂತಿಲ್ಲ. ಸಮಯ ಫಾಲೋ ಮಾಡಬೇಡಿ, ಸೇಫ್ಟಿ ಮೊದಲು ಕಾಯ್ದುಕೊಳ್ಳಿ ಎಂದು ಅವರು ತಿಳಿಸಿದ್ದಾರೆ.
ಖಾಸಗಿ ಬಸ್ಸಿನ ಬಾಗಿಲಿನಲ್ಲಿ ನೇತಾಡುತ್ತಿದ್ದ ಬಸ್ ಕಂಡಕ್ಟರ್ ಹೊರಕ್ಕೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಗರದ ನಂತೂರು ವೃತ್ತದಲ್ಲಿ ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದೆ. 15 ನಂಬರಿನ ಬಸ್ ಕದ್ರಿ ಕೆಪಿಟಿಯಿಂದ ಬಂದು ನಂತೂರು ವೃತ್ತದಲ್ಲಿ ಸಡನ್ ತಿರುವು ಪಡೆದಿದ್ದು ಎದುರಿನ ಬಾಗಿಲಲ್ಲಿ ನಿಂತಿದ್ದ ಕಂಡಕ್ಟರ್ ಕೆಳಕ್ಕೆ ಎಸೆಯಲ್ಪಟ್ಟಿದ್ದಾನೆ. ಬಸ್ ನಿರ್ವಾಹಕನಾಗಿದ್ದ ಮೂಲತಃ ಬಾಗಲಕೋಟ ಜಿಲ್ಲೆಯ ನಿವಾಸಿ, ಸದ್ಯ ಸುರತ್ಕಲ್ ತಡಂಬೈಲ್ ನಲ್ಲಿ ವಾಸವಿದ್ದ ಈರಯ್ಯ (23) ನೇರವಾಗಿ ರಸ್ತೆಗೆ ಎಸೆಯಲ್ಪಟ್ಟಿದ್ದರು. ಕೂಡಲೇ ಅಲ್ಲಿದ್ದ ಸ್ಥಳೀಯ ಪೊಲೀಸರು ಮತ್ತು ಸಾರ್ವಜನಿಕರು ಸೇರಿ ಕಂಡಕ್ಟರ್ ಅವರನ್ನು
ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ತಲೆಯ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಕಾರಣ ರಾತ್ರಿ 8 ಗಂಟೆ ಸುಮಾರಿಗೆ ಅವರು ಸಾವನ್ನಪ್ಪಿದ್ದರು. ಇದರ ವಿಡಿಯೋ ಎದುರಿನ ವಾಹನದಲ್ಲಿದ್ದ ಫ್ರಂಟ್ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು ಅದೀಗ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ ವೇಗವಾಗಿ ಚಲಿಸಿದ್ದರಿಂದಲೇ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕಲೆಕ್ಷನ್ ಮಾಡುವ ಮತ್ತು ಟೈಮ್ ಕೀಪಿಂಗ್ ಭರದಲ್ಲಿ ನಗರದ ಖಾಸಗಿ ಬಸ್ ನಿರ್ವಾಹಕರು, ಚಾಲಕರು ಎರ್ರಾಬಿರಿಯಾಗಿ ವರ್ತಿಸುತ್ತಿದ್ದು ಬಸ್ಸಿನಲ್ಲಿ ಸಿಬಂದಿಯಾಗಿದ್ದ ಯುವಕನೊಬ್ಬ ಬಲಿಯಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು