ಇತ್ತೀಚಿನ ಸುದ್ದಿ
ಖಾಸಗಿ ವಾಹನಗಳಲ್ಲಿ ಶಾಲಾ ಮಕ್ಕಳ ಸಾಗಾಟ: ದ.ಕ. ಶಾಲಾ ಮಕ್ಕಳ ವಾಹನ ಚಾಲಕರಿಂದ ಆರ್ ಟಿಒಗೆ ಮನವಿ
14/06/2023, 21:03

ಮಂಗಳೂರು( reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘ (ರಿ) ಮಂಗಳೂರು ಇವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್ ಅಸೋಸಿಯೇಷನ್ ಮತ್ತು ಕೆ.ಟಿ.ಡಿ.ಒ ದ.ಕ. ಜಿಲ್ಲೆ ಇವರ ಸಹಭಾಗಿತ್ವದಲ್ಲಿ ಜಿಲ್ಲೆಯಾದ್ಯಂತ ಕಾನೂನು ಬಾಹಿರವಾಗಿ ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ಖಾಸಗಿ (White Board) ವಾಹನಗಳಿಗೆ ಮತ್ತು ಬಾಡಿಗೆ ಮಾಡುವ ವಾಹನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪ್ರಾದೇಶಿಕ ಸಾರಿಗೆ ಅಧಿಕಾರಿ(RTO) ಗಳಿಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ಮನವಿ ಸ್ವೀಕರಿಸಿದ ಅಧಿಕಾರಿಗಳು ತಕ್ಷಣ ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.