3:18 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕಾಸರಗೋಡು | ನಿಶ್ಚಿತಾರ್ಥವಾಗಿದ್ದ ಹುಡ್ಗ- ಹುಡ್ಗಿ ಆತ್ಮಹತ್ಯೆ: ಪರಸ್ಪರ ವಿಡಿಯೋ ಕಾಲ್ ಮಾಡಿಕೊಂಡು ಸೂಸೈಡ್

14/08/2026, 21:52

ಕಾಸರಗೋಡು(reporterkarnataka.com):ನಿಶ್ಚಿತಾರ್ಥವಾಗಿದ್ದ SBI ಬ್ಯಾಂಕ್ ಉದ್ಯೋಗಿಗಳಾದ ಕಾಸರಗೋಡು ಮತ್ತು ಕಣ್ಣೂರು ಮೂಲದ ಯುವ ಜೋಡಿ ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಘಟನೆಯಿಂದ ಎರಡೂ ಕುಟುಂಬಗಳಲ್ಲಿ ಆಘಾತ ಮೂಡಿದೆ.
ಕಾಸರಗೋಡು ಜಿಲ್ಲೆಯ ಪಳ್ಳಿಕ್ಕರ ಪೂಚಕ್ಕಾಡ್ ನಿವಾಸಿ ಪಿ.ಅನುಶ್ರೀ (25) ಅವರು ಮೈಸೂರು ಜಿಲ್ಲೆಯ ಹುಣಸೂರಿನ ಬಾಡಿಗೆ ಮನೆಯಲ್ಲಿ ಮೃತಪಟ್ಟಿದ್ದಾರೆ. ಅವರು ಹುಣಸೂರಿನ ಎಸ್ಬಿಐ ಶಾಖೆಯಲ್ಲಿ ಉದ್ಯೋಗಿಯಾಗಿದ್ದರು.
ಇದಾದ ಕೆಲವೇ ಗಂಟೆಗಳ ಬಳಿಕ, ಅನುಶ್ರೀ ಅವರೊಂದಿಗೆ ನಿಶ್ಚಿತಾರ್ಥವಾಗಿದ್ದ ಕಣ್ಣೂರು ಮೂಲದ ವಿ.ಅಮಲ್ (26) ಅವರು ಎರ್ನಾಕುಲಂ ನಾರ್ತ್ ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್ನಲ್ಲಿ ಮೃತಪಟ್ಟಿದ್ದಾರೆ. ಅಮಲ್ ಅವರು ಎರ್ನಾಕುಲಂನ ಎಂ.ಜಿ. ರೋಡ್ ಎಸ್ಬಿಐ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದರು.
ಡಿಸೆಂಬರ್ 26ಕ್ಕೆ ಮದುವೆ ನಿಗದಿ ಅನುಶ್ರೀ ಮತ್ತು ಅಮಲ್ ಅವರ ನಿಶ್ಚಿತಾರ್ಥ ಇತ್ತೀಚೆಗಷ್ಟೇ ನಡೆದಿತ್ತು.ಡಿಸೆಂಬರ್ 26ರಂದು ಮದುವೆ ದಿನಾಂಕ ನಿಗದಿಯಾಗಿತ್ತು. ಕಳೆದ ಶನಿವಾರ ಇಬ್ಬರೂ ಕಾಸರಗೋಡಿನ ಮನೆಗೆ ಬಂದಿದ್ದು, ಭಾನುವಾರ ಸಂಜೆ ತಮ್ಮ ಕೆಲಸದ ಸ್ಥಳಗಳಿಗೆ ಮರಳಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ ಇಬ್ಬರೂ ವಿಡಿಯೋ ಕರೆ ಮೂಲಕ ಮಾತನಾಡಿದ್ದರು. ಬಳಿಕ ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ವಿಡಿಯೋ ಕರೆಯಲ್ಲಿ ಏನು ಮಾತುಕತೆ ನಡೆದಿದೆ ಅಥವಾ ಸಾವಿಗೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇಬ್ಬರೂ ಯಾವುದೇ ಡೆತ್ ನೋಟ್ ಬರೆದಿಟ್ಟಿಲ್ಲ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು