3:41 AM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕಾಸರಗೋಡಿನ ಮಹಿಳೆಯ ಮೇಲೆ ಮಂಗಳೂರಿನ ಖಾಸಗಿ ಆಸ್ಪತ್ರೆ, ಲಾಡ್ಜ್ ನಲ್ಲಿ ನಿರಂತರ ಅತ್ಯಾಚಾರ: ಹೊಸದುರ್ಗಾದ ಆರೋಪಿಯ ಬಂಧನ

30/05/2024, 12:07

ಮಂಗಳೂರು(reporterkarnataka.com): ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆ ದಾಖಲಾದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದ ಆಘಾತಕ್ಕಾರಿ ವಿಷಯ ಬೆಳಕಿಗೆ ಬಂದಿದೆ. ಈ ಕುರಿತು ಸಂತ್ರಸ್ತ ಮಹಿಳೆ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಪ್ರಕರಣ ಸಂಬಂಧಿಸಿದಂತೆ ಬಂಧಿತ ಆರೋಪಿಯನ್ನು ಕೇರಳದ ಹೊಸದುರ್ಗಾ ತಾಲೂಕಿನ ಪುಲ್ಲೂರು ಗ್ರಾಮದ ನಿವಾಸಿಯಾದ ಸುಜಿತ್ ಎಂದು ಗುರುತಿಸಲಾಗಿದೆ.
ಪಿಸ್ತೂಲ ಖಾಯಿಲೆಯಿಂದ ಬಳಲುತ್ತಿದ್ದ ಕಾಸರಗೋಡು ಮೂಲದ ಮಹಿಳೆಯೊಬ್ಬರು ಚಿಕಿತ್ಸೆಯನ್ನು ಪಡೆಯಲು ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ಸುಜಿತ್ ಎಂಬವರ ಜತೆ ಮಾರ್ಚ್ 13ರಂದು ಬಂದಿದ್ದರು. ಚಿಕಿತ್ಸೆಯ ನಿಟ್ಟಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆಯುತ್ತಿರುವಾಗ ಮಾರ್ಚ್ 16ರಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ ಸುಜಿತ್ ಬಲವಂತವಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಒಪ್ಪಿಗೆಯಿಲ್ಲದೇ ಬಟ್ಟೆಗಳನ್ನು ತೆಗೆದು ಅತ್ಯಾಚಾರ ಮಾಡಿ ಅವರ ನಗ್ನ ಫೋಟೋಗಳನ್ನು ತನ್ನ ಪೋನ್ ನಲ್ಲಿ ತೆಗೆದುಕೊಂಡಿದ್ದಾನೆ. ನಂತರ ಏಪ್ರಿಲ್ 4ರಂದು ಸುಜಿತ್ ಮಹಿಳೆಗೆ ಅವರ ನಗ್ನ ಪೋಟೋಗಳನ್ನು ತೋರಿಸಿ ಮಂಗಳೂರಿಗೆ ಬರುವಂತೆ ಒತ್ತಾಯಪೂರ್ವಕವಾಗಿ ಕರೆದುಕೊಂಡು ಬಂದು ಏಪ್ರಿಲ್ 4ರಿಂದ 8ರವರೆಗೆ ಮಂಗಳೂರು ಖಾಸಗಿ ಹೊಟೇಲೊಂದರಲ್ಲಿ ಹೆದರಿಸಿ ಬಲವಂತವಾಗಿ ಅತ್ಯಾಚಾರ ಮಾಡಿ, ನಗ್ನ ಪೋಟೋಗಳನ್ನು ತೆಗೆದುಕೊಂಡಿದ್ದಾನೆ. ಮಹಿಳೆಗೆ ವುಡ್ ಪಾಯಿಜನ್ ಆಗಿದ್ದರಿಂದ ಏಪ್ರಿಲ್ 8ರಿಂದ ಮೇ 10ರವರಿಗೆ ಮಂಗಳೂರಿನ ಇನ್ನೊಂದು ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಮಯ ಅಲ್ಲಿ ಕೂಡಾ ಸುಜಿತ್ ಬಲವಂತವಾಗಿ ಮಹಿಳೆಗೆ ಅತ್ಯಾಚಾರ ಮಾಡಿದ್ದಾನೆ.
ಈ ವಿಚಾರವನ್ನು ಯಾರಲ್ಲಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರು ದಾಖಲಾಯಿಸಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು