ಇತ್ತೀಚಿನ ಸುದ್ದಿ
Kashmir | ಪಹಲ್ಗಾಮ್ ನಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಸಚಿವ ಸಂತೋಷ್ ಲಾಡ್ ಚರ್ಚೆ
23/04/2025, 14:33

ಪಹಲ್ಗಾಮ್(reporterkarnataka.com): ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿಕೊಂಡು ನಡೆದ ದಾಳಿಯಲ್ಲಿ ಸಂತ್ರಸ್ತರಾದವರ ರಕ್ಷಣೆಗೆ ಕರ್ನಾಟಕದಿಂದ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ವಿವರಣೆ ನೀಡಿದರು.
ಕನ್ನಡಿಗರ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಪಹಲ್ಗಾಮ್ ಗೆ ಸಂತೋಷ್ ಲಾಡ್ ಅವರು ಬಂದಿಳಿದಿದ್ದಾರೆ.
ಬೆಳಗ್ಗಿನಿಂದಲೇ ಲಾಡ್ ಅವರು ಮೃತದೇಹವನ್ನು ಇರಿದಿರುವ ಸ್ಥಳಗಳಿಗೆ ತೆರಳಿ ಮೃತದೇಹ ಗುರುತಿಸಲು ಸಂಬಂಧಿಕರಿಗೆ ಸಹಾಯ ಮಾಡುತ್ತಿದ್ದಾರೆ.
*ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಜೊತೆಗೆ ಚರ್ಚೆ:*
ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ಮಾತನಾಡಿದ ಲಾಡ್ ಅವರು, ರಕ್ಷಣಾ ಕಾರ್ಯದ ಬಗ್ಗೆ ವಿವರಣೆ ನೀಡಿದರು.
*ಮೃತದೇಹಗಳಿಗೆ ಗೌರವ ನಮನ:*
ಉಗ್ರರ ದಾಳಿಯಲ್ಲಿ ಮೃತರಾದವರ ಪಾರ್ಥಿವ ಶರೀರವನ್ನು ಶ್ರೀನಗರದಲ್ಲಿ ಇರಿಸಲಾಗಿದ್ದು, ಈ ವೇಳೆ ಸಚಿವ ಲಾಡ್ ಮೃತದೇಹಗಳಿಗೆ ನಮನ ಸಲ್ಲಿಸಿದರು.