ಇತ್ತೀಚಿನ ಸುದ್ದಿ
ಕಟಪಾಡಿ: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ದಾರುಣ ಸಾವು
11/12/2022, 22:39

ಉಡುಪಿ(reporterkarnataka.com): ಬೈಕ್ ವೊಂದು ಡಿಕ್ಕಿ ಹೊಡೆದು ಪಾದಾಚಾರಿಯೊಬ್ಬರು ಮೃತಪಟ್ಟ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಡೆದಿದೆ.
ಮೃತರನ್ನು ಕಟಪಾಡಿ ಏಣಗುಡ್ಡೆ ಅಗ್ರಹಾರದ ಸತೀಶ್ ಎಂದು ಗುರುತಿಸಲಾಗಿದೆ. ಸತೀಶ್ ಅವರು ಕಟಪಾಡಿಯಲ್ಲಿ ರಸ್ತೆ ದಾಟುತ್ತಿದ್ದರು. ಈ ವೇಳೆ ರಭಸವಾಗಿ ಬಂದ ಬೈಕ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರ ಪರಿಣಾಮ ಸತೀಶ್ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.