ಇತ್ತೀಚಿನ ಸುದ್ದಿ
ಕಟೀಲು, ಬಪ್ಪನಾಡು, ಶಿಬರೂರು ದೇಗುಲಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ
12/04/2024, 16:13

ಕಟೀಲು(reporterkarnataka.com): ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಬೆಳಿಗ್ಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ಪ್ರಚಾರ ಕಾರ್ಯವನ್ನು ಆರಂಭಿಸಿದರು. ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಮಾಜಿ ಸಚಿವ ಅಭಯಚಂದ್ರ ಜೈನ್, ಬಿಲ್ಲವ ಮಹಾಮಂಡಲ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಗುರುರಾಜ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.