8:49 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಕಟೀಲು: ದಸರಾ ಮಹೋತ್ಸವ ಹಿನ್ನೆಲೆಯಲ್ಲಿ  26ರಿಂದ ರಸ್ತೆ ಸಂಚಾರ ತಾತ್ಕಾಲಿಕ ಮಾರ್ಪಾಡು

21/09/2022, 20:01

ಮಂಗಳೂರು(reporterkarnataka.com): ದಸರಾ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ಮತ್ತು ಲಲಿತ ಪಂಚಮಿ ಮಹೋತ್ಸವ ನಡೆಯಲಿರುವ ಹಿನ್ನಲೆಯಲ್ಲಿ  ಸೆ.26ರ ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್ 5ರ ರಾತ್ರಿ 11 ಗಂಟೆಯವರೆಗೆ ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು ಮಾಡಿ ಬದಲಿ ವ್ಯವಸ್ಥೆ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಭಾರತೀಯ ಮೋಟಾರು ವಾಹನ ಕಾಯ್ದೆ 1988 ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮಗಳು 1989ರ ನಿಯಮ 217ರಲ್ಲಿ ಪ್ರದತ್ತ ಅಧಿಕಾರವನ್ನು ಚಲಾಯಿಸಿ ಪೊಲೀಸ್  ಆಯುಕ್ತರೂ ಆಗಿರುವ ಅಪರ ದಂಡಾಧಿಕಾರಿಗಳಾದ ಎನ್. ಶಶಿಕುಮಾರ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.

ಸೆ.26ರ ಬೆಳಿಗ್ಗೆ 6 ಗಂಟೆಯಿಂದ ಅಕ್ಟೋಬರ್ 05ರ ರಾತ್ರಿ 11 ಗಂಟೆಯವರೆಗೆ ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು ಮಾಡಿ ಬದಲಿ ವ್ಯವಸ್ಥೆ ಜಾರಿಗೆ ಬರಲಿದೆ.

ಬದಲಿ ವ್ಯವಸ್ಥೆ ವಿವರ: ಮಂಗಳೂರು- ಬಜಪೆ ಕಡೆಯಿಂದ ಕಟೀಲಿಗೆ ಬರುವ ವಾಹನಗಳು ಮಲ್ಲಿಗೆಯಂಗಡಿ ಕ್ರಾಸ್‍ನಿಂದ ಏಕಮುಖವಾಗಿ ಚಲಿಸಿ, ಗಿಡಿಗೆರೆ ರಸ್ತೆ ಮೂಲಕ ಕಟೀಲು ಕಾಲೇಜು ಮುಖ್ಯ ರಸ್ತೆಯನ್ನು ಸೇರುವುದು. ಕಟೀಲಿನಿಂದ ಮಂಗಳೂರು ಕಡೆಗೆ ಹೋಗುವ ಎಲ್ಲ ವಾಹನಗಳು ದೇವಸ್ಥಾನದ ಪದವಿ ಪೂರ್ವ ಕಾಲೇಜು ಮೈದಾನದ ಮೂಲಕ ಬ್ಯಾಂಕ್ ಆಫ್ ಬರೋಡಾ ಎದುರುಗಡೆ ರಸ್ತೆಯಲ್ಲಿ ಚಲಿಸಿ ಬಜಪೆ ಮಾರ್ಗವಾಗಿ ಮಂಗಳೂರು ಕಡೆಗೆ ಸಂಚರಿಸುವುದು. ಉಲ್ಲಂಜೆ ರಸ್ತೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು ಮತ್ತು ಮಲ್ಲಿಗೆಯಂಗಡಿಯಿಂದ ಕಟೀಲು ಹಾಗೂ ಮಂಗಳೂರು ಕಡೆಗೆ ಹೋಗುವ ವಾಹನಗಳು ಮಲ್ಲಿಗೆಯಂಗಡಿ ಜಂಕ್ಷನ್‍ನಿಂದ ಗಿಡಿಗೆರೆ ರಸ್ತೆಗೆ ಏಕಮುಖವಾಗಿ ಚಲಿಸಿ ಕಟೀಲು ಕಾಲೇಜು ಮುಖ್ಯ ರಸ್ತೆಯನ್ನು ಸೇರುವುದು. 

ರಥಬೀದಿಯಲ್ಲಿ ಎಲ್ಲ ವಾಹನಗಳ ಸಂಚಾರ ಹಾಗೂ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ (ವಾಹನ ಪೂಜೆಗೆ ಸಂಬಂಧಿಸಿದ ವಾಹನಗಳನ್ನು ಹೊರತುಪಡಿಸಿ) ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು