ಇತ್ತೀಚಿನ ಸುದ್ದಿ
ಕಾಟಿಪಳ್ಳ ಘಟನೆ ದುರದೃಷ್ಟಕರ; ಕರಾವಳಿಗರು ಶಾಂತಿ- ಸೌಹಾರ್ದತೆ ಕಾಪಾಡಿ: ಸಿಎಂ ಬೊಮ್ಮಾಯಿ
25/12/2022, 20:57

ಮಂಗಳೂರು(reporterkarnataka.com): ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ನಡೆದ ಅಹಿತಕರ ಘಟನೆ ದುರದೃಷ್ಟಕರ. ಇಂತಹ ಘಟನೆ ನಡೆಯಬಾರದಿತ್ತು. ಜನರು ಯಾವುದೇ ಊಹಾಪೋಹಕ್ಕೆ ಕಿವಿಗೊಡದೆ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮೂಡುಬಿದರೆಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಮಾಧ್ಯಮ ಜತೆ ಮಾತನಾಡಿದರು.
ಕಾಟಿಪಳ್ಳ ಕೊಲೆ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಆದಷ್ಟು ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು. ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎಂಬ ತನಿಖೆ ನಡೆಯಲಿದೆ ಎಂದು ಅವರು ನುಡಿದರು.
ಕಾಟಿಪಳ್ಳ ಘಟನೆ ದುರದೃಷ್ಟಕರ; ಕರಾವಳಿಗರು ಶಾಂತಿ- ಸೌಹಾರ್ದತೆ ಕಾಪಾಡಿ: ಸಿಎಂ ಬೊಮ್ಮಾಯಿ
ಮೂಡುಬಿದರೆಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಪಾಲ್ಗೊಳ್ಳಲು ನಾನು ಆಗಮಿಸಿದ್ದೇನೆ. ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮಕ್ಜಳಲ್ಲಿ ಶಿಸ್ತು, ದೇಶಪ್ರೇಮ ಮೂಡಿಸುವಲ್ಲಿ ಬಹಳ ಅಗತ್ಯ. ರಾಜ್ಯದಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಉತ್ತಮ ಕೆಲಸ ಮಾಡುತ್ತಿದೆ. ಹಾಗಾಗಿ ಅಧಿವೇಶನ ನಡೆಯುತ್ತಿದ್ದರೂ ಪೂರ್ವ ನಿಗದಿತ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದೇನೆ ಎಂದು ಸಿಎಂ ನುಡಿದರು.