10:31 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕಟ್ಟಡ ನಿರ್ಮಾಣಕ್ಕೆ ಭೂಮಿ ಅಗೆತ: ಕೇಸು ದಾಖಲಿಸಲು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ

02/08/2024, 20:56

ಮಂಗಳೂರು(reporterkarnataka.com):ಮಳೆಗಾಲದಲ್ಲಿ ನಿರ್ಮಾಣ ಚಟುವಟಿಕೆಗಳಿಗೆ ಭೂಮಿ ಅಗೆಯುವುದರಿಂದ ಭೂಕುಸಿತ ಸಾಧ್ಯತೆಗಳಿರುವುದರಿಂದ ತಾತ್ಕಾಲಿಕವಾಗಿ ನಿಲ್ಲಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಅವರು ಶುಕ್ರವಾರ ನಗರದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಈ ರೀತಿಯ ಕಾಮಗಾರಿಯಿಂದ ಸಾರ್ವಜನಿಕ ಸಮಸ್ಯೆ ಯಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಕಾರ್ಮಿಕರು ಪ್ರಾಣ ಕಳೆದುಕೊಂಡಿರುವ ಘಟನೆಗಳು ನಡೆದಿವೆ.ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಮಳೆಗಾಲದಲ್ಲಿ ನಿರ್ಮಾಣ ಕಾರ್ಯಗಳಿಗೆ ಭೂಮಿ ಅಗೆತಕ್ಕೆ ಅವಕಾಶ ನೀಡಬಾರದು. ಇದನ್ನು ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್ ಮಾತನಾಡಿ, ಈಗಾಗಲೇ ನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಅಗತೆವನ್ನು ನಿಲ್ಲಿಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್, ಜಿಪಂ ಸಿಇಓ ಡಾ. ಆನಂದ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು