2:09 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಕಾಪು: ಆ್ಯಂಬುಲೆನ್ಸ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವೃದ್ಧ ವ್ಯಕ್ತಿ ಸಾವು; ಚಾಲಕನಿಗೂ ಸಣ್ಣಪುಟ್ಟ ಗಾಯ

07/11/2021, 07:58

ಉಡುಪಿ(reporterkarnataka.com): ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕಾಪುವಿನ ಕೋತಲ್ ಕಟ್ಟೆಯ‌ ರಾ.ಹೆ. 66ರಲ್ಲಿ‌‌ ಇಂದು ನಡೆದಿದೆ.

ಮೃತರನ್ನು ಉಳಿಯಾರಗೋಳಿ ಗ್ರಾಮದ ಕೆಳತೋಟ ನಿವಾಸಿ ಗೋವಿಂದ ಪೂಜಾರಿ (65) ಎಂದು ಗುರುತಿಸಲಾಗಿದೆ. ಗೋವಿಂದ ಪೂಜಾರಿ ರಸ್ತೆ ದಾಟಲು ನಿಂತಿದ್ದರು. ಈ ವೇಳೆ ಅವರಿಗೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿದ್ದು, ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. 

ಘಟನೆಯಲ್ಲಿ ಆ್ಯಂಬುಲೆನ್ಸ್ ಚಾಲಕ ಮಣಿ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು