6:10 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಕಾಪು: ತಮಿಳುನಾಡು ದೋಣಿ ಡಿಕ್ಕಿ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಓರ್ವ ಮೀನುಗಾರ ನಾಪತ್ತೆ

25/03/2026, 17:55

ಉಡುಪಿ(reporterkarnataka.com): ಕಾಪು ಕಡಲ ಕಿನಾರೆಯಲ್ಲಿ ಅಕ್ರಮ ಪಾಚ್ಚಾಲೆ (ಅಜಿರ್ ) ತೆಗೆಯುತ್ತಿದ್ದ ತಮಿಳುನಾಡು ಮೂಲದ ಮೀನುಗಾರ ದೋಣಿ ಗುದ್ದಿದ ಪರಿಣಾಮ, ಸ್ಥಳೀಯ ಮೀನುಗಾರ ದೋಣಿ ಮುಗುಚಿ ಇಬ್ಬರು ಮೀನುಗಾರರು ನೀರಿಗೆ ಬಿದ್ದು ಒಬ್ಬನನ್ನು ರಕ್ಷಿಸಲಾಗಿದ್ದು ಇನ್ನೊಬ್ಬ ಮೀನುಗಾರ ನಾಪತ್ತೆಯಾದ ಘಟನೆ ನಡೆದಿದೆ.
ಕಳೆದ ಕೆಲವು ದಿನಗಳಿಂದ ತಮಿಳುನಾಡು ಮೂಲದ ಮೀನುಗಾರರು ಅಕ್ರಮ ಮೀನುಗಾರಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಮೀನುಗಾರರು ಸಣ್ಣ ದೋಣಿಯಲ್ಲಿ ತೆರಳಿ ತಮಿಳುನಾಡು ಮೂಲದ ಮೀನುಗಾರರ ಜೊತೆ ಮೀನುಗಾರಿಕೆ ಮಾಡದಂತೆ ಮನವಿ ಮಾಡಲು ಮುಂದಾಗಿದ್ದರು.
ಈ ವೇಳೆ ತಮಿಳುನಾಡಿನ ದೊಡ್ಡ ದೋಣಿಯನ್ನು ಸ್ಥಳೀಯ ಮೀನುಗಾರರ ಸಣ್ಣ ದೋಣಿಗೆ ಉದ್ದೇಶಪೂರ್ವಕ ಡಿಕ್ಕಿ ಹೊಡೆಸಿದ್ದಾರೆ. ಈ ವೇಳೆ ಕಾಪು ಮೂಲದ ದೋಣಿ ಮುಗುಚಿ ಬಿದ್ದು ಇಬ್ಬರು ಮೀನುಗಾರರು ನೀರಿಗೆ ಬಿದ್ದಿದ್ದು ಒಬ್ಬನನ್ನು ರಕ್ಷಿಸಲಾಗಿದ್ದು, ಇನ್ನೊಬ್ಬ ಮೀನುಗಾರ ನಾಪತ್ತೆ ಯಾಗಿದ್ದಾನೆ.
ಘಟನೆ ಬಳಿಕ ತಮಿಳುನಾಡು ಮೂಲದ ಮೀನುಗಾರರು ಮಲ್ಪೆಯತ್ತ ಪಲಾಯನ ಮಾಡಿದ್ದಾಗಿ ಸ್ಥಳೀಯರು ದೂರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು