ಇತ್ತೀಚಿನ ಸುದ್ದಿ
ಕಾವೇರಿ ನದಿ ನೀರು ಹಂಚಿಕೆ ವಿವಾದ: ಅಥಣಿಯಲ್ಲಿ ಪ್ರತಿಭಟನೆ; ಮಾನವ ಸರಪಳಿ
29/09/2023, 18:38
ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com
ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದ ವರೆಗೆ ಕನ್ನಡ ಹೋರಾಟಗಾರರು ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿದರು.
ಅಥಣಿಯಲ್ಲಿ 50ಕ್ಕೂ ಹೆಚ್ಚು ಪ್ರತಿಭಟನೆಕಾರರು ಪ್ರತಿಭಟನೆ ನಡೆಸಿದರು. ಕರವೇ ಪ್ರವೀಣ ಶೆಟ್ಟಿ ಬಣ ಹಾಗೂ ರೈತ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಸರ್ಕಾರದ ವಿರುದ್ದ ಘೋಷಿಸಲಾಯಿತು. ಪ್ರತಿಭಟನಾಕಾರರು ಅಥಣಿ ತಹಶೀಲ್ದಾರ ರಾಜೇಶ ಬುರ್ಲಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸದಂತೆ ಸರಕಾರಕ್ಕೆ ಮನವಿ ಮಾಡಲಾಯಿತು.