1:30 AM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಕವಿ, ಶಿಕ್ಷಕ, ಸಂಪಾದಕ ನಾರಾಯಣ ರೈ ಕಕ್ಕುವಳ್ಳಿಗೆ ಸನ್ಮಾನ: ‘ಮುಕ್ತಕ ಪುಷ್ಪ’ ಕೃತಿ ಬಿಡುಗಡೆ

06/12/2022, 10:59

ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇಲ್ಲಿನ ಮಾಧುರಿ ಸೌಧ ಸಭಾಂಗಣದಲ್ಲಿ ಭಾನುವಾರ ಜರಗಿದ ಅಂತಾರಾಜ್ಯ ಮಟ್ಟದ ಮಧು ಕವಿಗೋಷ್ಠಿಯ ಸಮಾರಂಭದಲ್ಲಿ ಹಿರಿಯ ಕವಿ, ನಿವೃತ್ತ ಶಿಕ್ಷಕ , ಮಧುಪ್ರಪಂಚ ಪತ್ರಿಕೆಯ ಪ್ರಧಾನ ಸಂಪಾದಕ ನಾರಾಯಣ ರೈ ಕುಕ್ಕುವಳ್ಳಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಜಯಾನಂದ ಪೆರಾಜೆ ಅಭಿನಂದನಾ ಭಾಷಣ ಮಾಡಿದರು. 40 ವರ್ಷ ಶಿಕ್ಷಕರಾಗಿ, ಪತ್ರಿಕೆಯಲ್ಲಿ ಅಂಕಣಕಾರರಾಗಿ ಗುರುತಿಸಲ್ಪಟ್ಟಿದ್ದಾರೆ. ಉತ್ತಮ ವ್ಯಂಗ್ಯ ಚಿತ್ರಕಾರರಾಗಿ , ಕಲಾವಿದನಾಗಿ, ಕವಿಯಾಗಿ ಸಾಧನೆ ಮಾಡಿದ ಕುಕ್ಕುವಳ್ಳಿಯವರು ಮಧು ಪ್ರಪಂಚ ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು . ಸಭಾಧ್ಯಕ್ಷ ಹಿರಿಯ ಪತ್ರಕರ್ತ ವಿ.ಬಿ. ಅರ್ತಿಕಜೆ ರವರು ಕುಕ್ಕುವಳ್ಳಿಯವರ ಸಾಧನೆಯ ಬಗ್ಗೆ ಅಭಿನಂದಿಸಿ ಶುಭ ಹಾರೈಸಿ ಕಕ್ಕುವಳ್ಳಿಯವರ ಸರಳ ವ್ಯಕ್ತಿತ್ವವನ್ನು ಕೊಂಡಾಡಿದರು. ಜಿಲ್ಲಾ ಜೇನು ವ್ಯವಸಾಯಗಾರರ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ಅವರ ಕಾರ್ಯವೈಖರಿಯ ಬಗ್ಗೆ ತಿಳಿಸಿ ಜೇನು ಸಂಘದ ಸ್ಮರಣಿಕೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತಿನ ಅಧ್ಯಕ್ಷ ಉಮೇಶ್ ನಾಯಕ್ ಕನ್ನಡ ಶಾಲು ಹಾಕಿ ಗೌರವಿಸಿ ‘ಮುಕ್ತಕ ಪುಷ್ಪ’ ಕೃತಿ ಬಿಡುಗಡೆ ಮಾಡಿದರು. ಕೇಂದ್ರ ಕನ್ನಡ ಸಾಹಿತ್ಯ ಜಿಲ್ಲಾಧ್ಯಕ್ಷ ಡಾ.ಸುರೇಶ್ ನೆಗಳಗುಳಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಸಮುದ್ರವಳ್ಳಿ ವಾಸು, ಪಿಂಗಾರ ಸಾಹಿತ್ಯ ಬಳಗದ ಸಂಚಾಲಕ ರೈಮಂಡ್ ಡಿಕುನ್ಹ ಕವಿಗೋಷ್ಠಿಗೆ ಚಾಲನೆ ನೀಡಿ 50 ಕವಿಗಳು ಸ್ವರಚಿತ ಕವನ ವಾಚಿಸಿದರು, ಶಿಕ್ಷಣ ಸಂಯೋಜಕ ಹರಿಪ್ರಸಾದ್ ಶುಭ ಹಾರೈಸಿದರು.

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಪುತ್ತೂರು ತಾಲೂಕು ಅಧ್ಯಕ್ಷೆ ಶಾಂತ ಪುತ್ತೂರು ಸ್ವಾಗತಿಸಿ ಪ್ರಸ್ತಾವನೆ ಗೈದರು. ಅಪೂರ್ವ ಕಾರಂತ್ ನಿರೂಪಿಸಿ, ಜಿ.ಪಿ. ಶಾಂ ಭಟ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು