9:45 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕಾವೂರಿನಲ್ಲಿ ಮನೆ ಮೇಲೆ ಮರ ಬಿದ್ದು 3 ಮಂದಿಗೆ ಗಾಯ: ಘಟನಾ ಸ್ಥಳಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಭೇಟಿ; ನೆರವು ಘೋಷಣೆ

11/06/2023, 11:39

ಸುರತ್ಕಲ್(reporterkarnataka.com): ವಿಪರೀತ ಮಳೆಯಿಂದಾಗಿ ಕಾವೂರು ಬಿಜಿಎಸ್ ಪ್ರೌಢಶಾಲೆ ಬಳಿ ಮನೆಯ ಮೇಲೆ ಬೃಹತ್‌ ಮರ ಉರುಳಿಬಿದ್ದು, ಮನೆ ಮಾಲಕ ಸದಾನಂದ ,ಪತ್ನಿ ರತ್ನ ಹಾಗೂ ಅವರ ಪುತ್ರಿ ಗಾಯಗೊಂಡಿದ್ದು, ಘಟನಾ ಸ್ಥಳಕ್ಕೆ ಶಾಸಕ ಡಾ. ವೈ. ಭರತ್ ಶೆಟ್ಟಿ ಭೇಟಿ ನೀಡಿ ಎಲ್ಲ ರೀತಿಯ ನೆರವು ಘೋಷಿಸಿದರು.
ಮನೆ ಸಂಪೂರ್ಣ ಜಖಂಗೊಂಡಿದ್ದು, ಸಾಕಷ್ಟು ಹಾನಿ ಸಂಭವಿಸಿದೆ. ಮನೆಯ ವಸ್ತುಗಳು ಹಾನಿಗೀಡಾಗಿದ್ದು, ಶಾಸಕರಾದ ಡಾ.ಭರತ್ ಶೆಟ್ಟಿಅವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಗಾಯಗೊಂಡವರ ಆರೋಗ್ಯ ವಿಚಾರಿಸಿ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದಲ್ಲಿ ಬೇಕಾದ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಮನಪಾ ಸದಸ್ಯೆ ಸುಮಂಗಲಾ ರಾವ್, ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು