3:35 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಕಾವೂರು: ಬಿಜೆಪಿಯ ಗೋಡೆ ಬರಹ ಕಾರ್ಯಕ್ರಮಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

03/02/2024, 15:52

ಮಂಗಳೂರು(reporterkarnataka.com): ಭಾರತವು ಇಂದು ಆರ್ಥಿಕವಾಗಿ ಬಲಿಷ್ಠವಾಗಲು, ರಾಜತಾಂತ್ರಿಕ ಜಾಣ್ಮೆ ,ರಾಷ್ಟ್ರೀಯವಾದ ಮತ್ತು ಹಿಂದೂ ಸಮಾಜದ ಗೌರವ, ಅಸ್ಮಿತೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಇದೆಲ್ಲವೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದಿಂದ ಸಾಧ್ಯವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.

ಲೋಕಸಭಾ ಚುನಾವಣೆಯ ಪ್ರಚಾರಾರ್ಥವಾಗಿ ಉತ್ತರ ವಿಧಾನಸಭಾ ಕ್ಷೇತ್ರದ ಕಾವೂರು ಗಾಂಧಿ ನಗರದಲ್ಲಿ ಬಿಜೆಪಿಯ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇಶವು ಕಳೆದ 10 ವರ್ಷಗಳಲ್ಲಿ ಅಮೂಲಾಗ್ರ ಬದಲಾವಣೆ ಕಂಡು ಬರುತ್ತಿದೆ. ಇದು ಮುಂದುವರಿಯಲು ಮತ್ತೆ ಬಿಜೆಪಿ ಸರಕಾರ ಚುಕ್ಕಾಣಿ ಹಿಡಿಯಬೇಕಿದೆ. ಬಿಜೆಪಿ ಕಾರ್ಯಕರ್ತರು ಲೋಕಸಸಭಾ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೇರಿಸಲು ಉತ್ಸಾಹದಲ್ಲಿದ್ದಾರೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ರಣತಂತ್ರ ರೂಪಿಸಲಾಗಿದೆ. ಇದರ ಒಂದು ಭಾಗವಾಗಿ ಗೋಡೆ ಬರಹಕ್ಕೆ ಚಾಲನೆ ನೀಡಲಾಗಿದೆ ಎಂದರು.ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಪ್ರದಾನ ಕಾರ್ಯದರ್ಶಿ ಸಂದೀಪ್ ,ಗೋಡೆ ಬರಹ ಜಿಲ್ಲಾ ಸಂಚಾಲಕ ಮಹೇಶ್ ಜೋಗಿ,ಮಂಡಲ ಸಂಚಾಲಕ ಅಖಿಲ್ ಶೆಟ್ಟಿ ,ಬಿಜೆಪಿ ಮುಖಂಡರಾಧ ರಣ್‍ದೀಪ್ ಕಾಂಚನ್, ಚಂದ್ರಿಕಾ ಪ್ರಭಾಕರ್ ಮನಪಾ ಸದಸ್ಯರಾದ ಸುಮಂಗಳ ರಾವ್, ಲೋಹಿತ್ ಅಮೀನ್, ಕಿರಣ್ ಕುಮಾರ್ ಕೋಡಿಕಲ್, ಮನೋಜ್ ಕುಮಾರ್, ಶಿತೇಶ್ ಕೊಂಡೆ,ಶಾನ್ವಾಝ್ ಹುಸೈನ್, ಸಾಕ್ಷಾತ್ ಶೆಟ್ಟಿ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು