4:00 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕಾವೂರು: ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮ; ಹಕ್ಕು ಪತ್ರ,ಮಂಜೂರಾತಿ ಪತ್ರ ಸಹಿತ ವಿವಿಧ ಸವಲತ್ತು ವಿತರಣೆ

31/10/2022, 23:40

ಸುರತ್ಕಲ್(reporterkarnataka.com): ನಾಗರಿಕರಿಗೆ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ನಗರದ ಕಾವೂರಿನಲ್ಲಿ ಶಾಸಕ ಡಾ. ವೈ. ಭರತ್ ಶೆಟ್ಟಿ ಚಾಲನೆ ನೀಡಿದರು. ಹಕ್ಕುಪತ್ರ, ಮಂಜೂರಾತಿ ಪತ್ರ ಸಹಿತ ವಿವಿಧ ಸವಲತ್ತು ವಿತರಿಸಲಾಯಿತು. ಸುಮಾರು 3000 ಮಂದಿ ನಾಗರಿಕರು ಭಾಗವಹಿಸಿದ್ದು, 30 ಹೆಚ್ಚು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


ಮನೆ ಮಂಜೂರಾತಿ ಪತ್ರ, ಹಕ್ಕುಪತ್ರ, ಪರಿಹಾರ ಧನ,ವೃದ್ದಾಪ್ಯ ದಾಖಲೆ ವಿತರಣೆ ಮಾಡಲಾಯಿತಲ್ಲದೆ ,ಅಭಾ ಕಾರ್ಡ್ ಸಹಿತ ಜನಸಾಮಾನ್ಯರಲ್ಲಿ ಮಾಹಿತಿಯ ಕೊರತೆ ಇರುವ ಸರಕಾರದ ಅನೇಕ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಜನಸ್ಪಂದನಾ ಕಾರ್ಯಕ್ರಮ ಯಶಸ್ವಿಯಾಯಿತು.
ಈ ಸಂದರ್ಭ ಮಾತನಾಡಿದ ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು ಸರಕಾರದ ಯೋಜನೆ, ಸೌಲಭ್ಯಗಳನ್ನು ಸುಲಭವಾಗಿ ಜನರಿಗೆ ತಲುಪಿಸಲು ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಆರೋಗ್ಯ ಇಲಾಖೆಯಿಂದ ಹಿಡಿದು ಕಾರ್ಮಿಕ ಇಲಾಖೆಯನ್ನು ಸೇರಿಸಿ ಕಂದಾಯ ಇಲಾಖೆಯ ತನಕ ವಿವಿಧ ಇಲಾಖೆಗಳು ಒಂದೇ ಸೂರಿನಲ್ಲಿ ಪರಿಹಾರ ನೀಡುವಂತೆ ಮಾಡಲಾಗಿದೆ. ಹಕ್ಕುಪತ್ರ, ಮಾಸಾಶನ, ಪಿಂಚಣಿ, ವಿಕಲಚೇತನ ಸವಲತ್ತು, ಕಾರ್ಮಿಕ ಕಾರ್ಡ್, ಆಯುಷ್ಮಾನ್ ಕಾರ್ಡ್, ಆಧಾರ ಕಾರ್ಡ್ ಸಹಿತ ಎಲ್ಲವೂ ಇಲ್ಲಿ ಶೀಘ್ರದಲ್ಲಿ ಮಾಡಿಕೊಡಲಾಗುತ್ತದೆ. ಯಾವುದೇ ಕಾರಣಕ್ಕೆ ಒಂದು ದಿನದಲ್ಲಿ ಪರಿಹಾರ ಆಗದ ಸಮಸ್ಯೆ ಇದ್ದರೆ ಇಲಾಖೆ ಅಧಿಕಾರಿಗಳೊಂದಿಗೆ ಕಾರಣ ಚರ್ಚಿಸಿ ವಾರದೊಳಗೆ ಮನೆ, ಕಚೇರಿಗೆ ಪ್ರಮಾಣಪತ್ರ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ನುಡಿದರು.


ಕಾರ್ಯಕ್ರಮದಲ್ಲಿ ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ತಹಶೀಲ್ದಾರ್ ನವೀನ್ ಕುಮಾರ್, ಮನಪಾ ಸದಸ್ಯರಾದ ಶರತ್ ಕುಮಾರ್, ಸುಮಂಗಳ ರಾವ್, ಕಿರಣ್ ಕುಮಾರ್ ಕೋಡಿಕಲ್, ಲೋಹಿತ್ ಅಮೀನ್, ಮನೋಜ್ ಕುಮಾರ್, ಅನಿಲ್ ಕುಮಾರ್ , ಪಕ್ಷದ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ಮಹಾಶಕ್ತಿ ಕೇಂದ್ರದ‌ ಪ್ರಮುಖರು, ಶಕ್ತಿ ಕೇಂದ್ರ ಪ್ರಮುಖರು, ಬೂತ್ ಪ್ರಮುಖರು, ವಿವಿಧ ಇಲಾಖೆಯ ಅಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು