7:40 AM Friday27 - November 2026
ಬ್ರೇಕಿಂಗ್ ನ್ಯೂಸ್
ಪಶ್ಚಿಮ ಬಂಗಾಳಕ್ಕೆ ಇನ್ನು ಮುಂದೆ ಹೊಸ ಹೆಸರು!: ಮರು ನಾಮಕರಣಕ್ಕೆ ಅದೊಂದೇ ಕಾರಣ! ಮೇಕೆದಾಟು ಯೋಜನೆ : ಪರಿಸರ ಪರಿಣಾಮಗಳ ಅಧ್ಯಯನಕ್ಕೆ ಕೇಂದ್ರ ವನ್ಯಜೀವಿ ಮಂಡಳಿ ಒಪ್ಪಿಗೆ ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8…

ಇತ್ತೀಚಿನ ಸುದ್ದಿ

ಕಾವೂರು ಶ್ರೀಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ: ಫೆಬ್ರವರಿ 23ರಂದು ದೇವರ ಭಕ್ತಿಗೀತೆ ಬಿಡುಗಡೆ

16/02/2025, 19:39

ಮಂಗಳೂರು(reporterkarnataka.com): ಸುಮಾರು 800 ವರ್ಷಗಳಿಗೂ ಅಧಿಕ ಇತಿಹಾಸ ಹೊಂದಿರುವ ಪುರಾಣ ಪ್ರಸಿದ್ಧ ಕಾವೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮವು ಮಾರ್ಚ್ 1ರಿಂದ 9 ರವರೆಗೆ ಜರುಗಲಿದೆ.
ಈ ಪ್ರಯುಕ್ತ ಕಾವೂರಿನ ಯುವ ತಂಡವೊಂದು ನಿರ್ಮಿಸಿದ ಮಹಾಲಿಂಗೇಶ್ವರ ದೇವರ ಭಕ್ತಿಗೀತೆಯು ಫೆಬ್ರವರಿ 23ರಂದು ದೇಗುಲ ವಠಾರದಲ್ಲಿ ಬಿಡುಗಡೆಗೊಳ್ಳಲಿದೆ. ಭರತ್ ಗಟ್ಟಿ ಹಾಗೂ ವಿಕಾಸ್ ಶೆಟ್ಟಿ ಅವರ ಅದ್ಭುತ ಕಂಠದಿಂದ ಮೂಡಿ ಬಂದಿರುವ ಹಾಡಿಗೆ, ಸಂದೀಪ್ ದೇವಾಡಿಗ ಅತ್ಯುತ್ತಮ ಸಾಹಿತ್ಯವನ್ನ ಒದಗಿಸಿದ್ದಾರೆ. ನಿಖಿಲಾ ಡೆಕೋರ್ ನಿರ್ಮಾಣದಲ್ಲಿ ಮೂಡಿ ಬಂದ ಭಕ್ತಿಗೀತೆಯನ್ನು ಮಹಾಲಿಂಗೇಶ್ವರ ದೇವರ ಭಕ್ತರಿಗೆ ತಲುಪಿಸುವ ನಿಟ್ಟಿನಲ್ಲಿ ದೀಕ್ಷಿತ್ ಬೈದ್ಯ ಸಂಕಲನ ಮತ್ತು ಡಿಓಪಿ ಆಗಿ ಹಾಗೂ ನಿತೇಶ್ ಆಚಾರ್ಯ ಪೋಸ್ಟರ್ ಡಿಸೈನ್ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಡ್ರೋಣ್ ನಲ್ಲಿ ಸಿದ್ದು ಅವರು ತಮ್ಮ ಕೈಚಳಕದ ಮೂಲಕ ಗೀತೆಗೆ ಬೇಕಾದ ಅದ್ಭುತ ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು