9:20 PM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಕಾವ್ಯವನ್ನು ಅನುಭವಿಸಿ ಬರೆದರೆ ಉತ್ತಮ ಕವನ ಬರುತ್ತೆ: ಪತ್ರಕರ್ತ ರೇಮಂಡ್ ಡಿ.ಕುನ್ಹ ತಾಕೊಡೆ

15/08/2022, 18:57

ಮಂಗಳೂರು(reporterkarnataka.com):ಪ್ರೇರಣಾತ್ಮಕವಾಗಿ ಬರೆಯುವ ಸಾಹಿತಿಗಳು  ನಡು ನಡುವೆ ವಿರಾಮ ತೆಗೆದು ಕೊಂಡು ಅಭ್ಯಸಿಸಿ ಬರೆಯುವ ಹವ್ಯಾಸ ಇಟ್ಟುಕೊಳ್ಳಬೇಕು  ಆ ಮೂಲಕ ಒಂದು ಸೃಜನಾತ್ಮಕ ಸಾಹಿತ್ಯ ರಚಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತ ರೇಮಂಡ್ ಡಿ.ಕುನ್ಹ ತಾಕೋಡೆ ಹೇಳಿದರು .  

ಅವರು  ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ವತಿಯಿಂದ ನಗರದ ಕದ್ರಿ ಬಾಲಭವನದಲ್ಲಿ ಸ್ವಾತಂತ್ರ್ಯಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ ಭಾರತಾಂಬೆಗೆ ಕನ್ನಡದಾರತಿ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

ಈಗ ಸಂಘಟಕರು, ಸಂಶೋಧಕರು ಮತ್ತು ಸಾಹಿತಿಗಳು ಈ ಮೂರು ವರ್ಗದವರಿಂದ ಸಾಹಿತ್ಯ ಸೇವೆ ನಡೀತಿದೆ. ಇದರಲ್ಲಿ ಸಾಹಿತಿಗಳು ಸಂಶೋಧನೆ ಮತ್ತು ಸಂಘಟನೆ ಮಾಡಿದ್ರೆ ಉತ್ತಮ ಸಾಹಿತ್ಯ ಬರುತ್ತದೆ ಎಂದರು.   

ಇದೇ ಸಂದರ್ಭದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಗಝಲ್ ಕವಿ ಹಾಗೂ ಮುಕ್ತಕ ಕವಿ ಎಂದೇ ಜನಪ್ರಿಯರಾದ ಡಾ. ಸುರೇಶ್ ನೆಗಳಗುಳಿ ಅವರನ್ನು ಸನ್ಮಾನಿಸಲಾಯಿತು. 

ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಗುಣಾಜೆ ರಾಮಚಂದ್ರ ಭಟ್ ಮಾತನಾಡಿ, ಕವಿತೆ ಕಟ್ಟುತ್ತಾ ಹೋದಂತೆ ಅದು ಹುಟ್ಟುವುದು, ಕವನವನ್ನು ಮೊದಲ ಬಾರಿಗೆ ಓದಿದಾಗ ಎಲ್ಲಾ ಅರ್ಥವಾಗದೆ ಮರಳಿ ಓದಿಸಬೇಕು.  ಹಾಗೆಂದು ಕವನಗಳು ಅರ್ಥ ಮಾಡಲು ತುಂಬಾ ಕಷ್ಟವಾಗಿರಲೂಬಾರದು.  ಕವಿಗಳು ನಿರಂತರ ಅಧ್ಯಯನ ಮಾಡುತ್ತಿರಬೇಕು ,  ಶಬ್ಧ ಸಂಪತ್ತನ್ನು ಗಳಿಸಿ ಜೀವನಾನುಭವ ಹೊಂದಿರಬೇಕೆಂದು ಹೇಳಿದರು.    

 KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಸ್ವಾಗತಿಸಿ ಪ್ರಾಸ್ತಾವನೆಗೈದರು. NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಹಾಗೂ ಕವಯತ್ರಿ ರೇಖಾ ಸುದೇಶ್ ರಾವ್  ಉಪಸ್ಥಿತರಿದ್ದರು. ರೇಶ್ಮಾ ಶೆಟ್ಟಿ ಗೋರೂರು ನಿರೂಪಿಸಿದರು. ನಂತರ ನಡೆದ ಕವಿಗೋಷ್ಠಿಯಲ್ಲಿ ವಿವಿಧ ಜಿಲ್ಲೆಯ ಸುಮಾರು 30 ಕ್ಕೂ ಹೆಚ್ಚು ಕವಿಗಳು ತಮ್ಮ ಸ್ವರಚಿತ ಕವನ ವಾಚನ ಮಾಡಿದರು.  ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಗೀತ ಗಾಯನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು