12:14 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

‘ಗ್ರಾಮದ ಹುಡುಗರು’ ವಾಟ್ಸಪ್ ತಂಡದಿಂದ ಮೂಡಿಗೆರೆ ಗೌಡಹಳ್ಳಿ ಸರಕಾರಿ ಶಾಲೆಗೆ ಕಾಯಕಲ್ಪ: ಸುಣ್ಣಬಣ್ಣ ಜತೆಗೆ ಆಕರ್ಷಕ ಚಿತ್ತಾರ

19/02/2025, 17:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಗೌಡಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಗ್ರಾಮದ ಯುವಕರು ಮತ್ತು ವಿವಿಧ ಸಂಘ ಸಂಸ್ಥೆಗಳು ಸೇರಿ ಆಕರ್ಷಕ ರೂಪ ನೀಡಿದ್ದಾರೆ.
ಸರ್ಕಾರಿ ಶಾಲೆಗಳನ್ನು ಉಳಿಸಬೇಕು, ಸರ್ಕಾರಿ ಶಾಲೆಗಳ ಕಡೆಗೆ ಮಕ್ಕಳನ್ನು ಪೋಷಕರನ್ನು ಆಕರ್ಷಿಸಬೇಕು, ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕು, ಮಕ್ಕಳಲ್ಲಿ ಪರಿಸರ ಪ್ರಜ್ಞೆಯನ್ನು ಬೆಳೆಸಬೇಕು ಎಂಬ ಧ್ಯೇಯದೊಂದಿಗೆ ಗ್ರಾಮದ ಹುಡುಗರು ವಾಟ್ಸಾಪ್ ಗ್ರೂಪ್ ಸದಸ್ಯರು ವಿವಿಧ ಸಂಘಸಂಸ್ಥೆಗಳ ಮತ್ತು ದಾನಿಗಳ ನೆರವು ಪಡೆದು ಗೌಡಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಸುಣ್ಣ ಬಣ್ಣ ಬಳಿದು ಆಕರ್ಷಕವಾದ ಚಿತ್ತಾರಗಳನ್ನು ಮೂಡಿಸಿ ಶಾಲೆಗೆ ವಿಶಿಷ್ಟ ರೂಪ ನೀಡಿದ್ದಾರೆ.
ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳ ಕೊರತೆಯಿಂದ ದಿನದ ದಿನಕ್ಕೆ ಬಾಗಿಲು ಮುಚುತ್ತಿದ್ದು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ಬಹುತೇಕ ಕಡೆ ಬಂದಾಗುತ್ತಿವೆ ಮತ್ತೆ ಕೆಲವು ಕಡೆ ಶಾಲೆ ನಡೆಯುತ್ತಿದ್ದರು. ವಿದ್ಯಾರ್ಥಿಗಳಿಲ್ಲದೆ ಬಿಕೋ ಎನ್ನುತ್ತಿವೆ. ಇಂಥ ಸನ್ನಿವೇಶದಲ್ಲಿ ಸರ್ಕಾರಿ ಶಾಲೆಗೆ ನವರೋಪ ನೀಡಲು ಗ್ರಾಮೀಣ ಯುವಕರ ತಂಡದ ಪ್ರಯತ್ನ ಸ್ಥಳಿಯರಿಂದ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ.
ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯುವಕರು ಸೇರಿ ಸಂಘಟಿಸಿರುವ “ಗ್ರಾಮದ ಹುಡುಗರು” ವಾಟ್ಸಪ್ ಗ್ರೂಪ್ ತಂಡವು ಗ್ರಾಮ ಪಂಚಾಯತಿ ವ್ಯಾಪ್ತಿಯ ಗೌಡಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ನವರೂಪ ನೀಡುವುದರಲ್ಲಿ ಯಶಸ್ವಿಯಾಗಿದೆ.
ಶಾಲೆಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆಕರ್ಷಿತವಾಗಬೇಕಾದರೆ ಶಾಲೆಯ ಪರಿಸರವು ಪ್ರಮುಖ ಪಾತ್ರ ವಹಿಸುತ್ತದೆ ಈ ಹಿನ್ನೆಲೆಯಲ್ಲಿ ಗೌಡಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ವಿಶಿಷ್ಟವಾದ ಚಿತ್ರಕಲೆಗಳೊಂದಿಗೆ ಗೋಡೆಗಳನ್ನು ಸಿಂಗರಿಸಿ ಶಾಲೆಗೆ ಆಕರ್ಷಕ ರೂಪ ನೀಡಿದ್ದಾರೆ.
ರಾಜ್ಯದ ಹೆಸರಾಂತ ವರ್ಣಚಿತ್ರ ಕಲಾವಿದ ಹುಬ್ಬಳ್ಳಿ ಮೂಲದ ಯಲ್ಲಪ್ಪ ವೈ ಕುಂಬಾರ, ಚಿತ್ರದುರ್ಗ ಶಿವಕುಮಾರ್ ಕಂದಿಗೆರೆ, ತುಮಕೂರು ಮೂಲದ ಕಾರ್ತಿಕ್ ಅವರ ತಂಡ ಎರಡು ದಿನಗಳ ಕಾಲ ಗ್ರಾಮದಲ್ಲಿ ಇದ್ದು, ಕರ್ಣಾಟ ಬಲಸೇನೆ ತಂಡದ ಸದಸ್ಯರು ಸ್ವಯಂಪ್ರೇರಿತರಾಗಿ ಶಾಲೆಯ ಗೋಡೆ ಮತ್ತು ಕಾಂಪೌಂಡ್ ಗಳ ಮೇಲೆ ಆಕರ್ಷಕ ವರ್ಣಚಿತ್ರಗಳನ್ನು ಮೂಡಿಸಿದ್ದಾರೆ.
ಪಶ್ಚಿಮ ಘಟ್ಟಗಳ ಪರ್ವತ ಸಾಲು, ಪೂರ್ಣಚಂದ್ರ ತೇಜಸ್ವಿ, ದ.ರಾ. ಬೇಂದ್ರೆ, ಡಾ. ರಾಜಕುಮಾರ್, ಭಗತ್ ಸಿಂಗ್ ಸೇರಿದಂತೆ ಅನೇಕ ಮಹನೀಯರ ಚಿತ್ರಗಳನ್ನು ಗೋಡೆಯ ಮೇಲೆ ಮೂಡಿಸಿದ್ದಾರೆ.


ನಮ್ಮೂರ ಸರ್ಕಾರಿ ಕನ್ನಡ ಶಾಲೆ ಉಳಿಸೋಣ ಬನ್ನಿ ಎಂಬ ಕರೆಯೊಂದಿಗೆ ಗ್ರಾಮೀಣ ಪ್ರದೇಶದ ಯುವಕರು ಸರ್ಕಾರಿ ಶಾಲೆಗಳ ಕಡೆ ಮುತುವರ್ಜಿ ತೋರಿರುವುದು ಒಂದು ಸಕಾರಾತ್ಮಕ ಬೆಳವಣಿಗೆಯಾಗಿದ್ದು, ಎಲ್ಲಾ ಗ್ರಾಮಗಳಲ್ಲಿ ಸ್ಥಳೀಯರು ಸರ್ಕಾರಿ ಶಾಲೆಗಳ ಬಗ್ಗೆ ಕಾಳಜಿ ವಹಿಸುವುದು ಪ್ರಸ್ತುತ ಜರೂರತ್ತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು