7:11 PM Thursday15 - May 2025
ಬ್ರೇಕಿಂಗ್ ನ್ಯೂಸ್
ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು…

ಇತ್ತೀಚಿನ ಸುದ್ದಿ

ಕೆಂಪೇಗೌಡರು ಕಟ್ಟಿದ ಕೆರೆಗಳನ್ನು ನುಂಗಿದವರು 4-5 ಕೆಜಿ ಅಕ್ಕಿ ನೀಡಿ ಪೋಸು ಕೊಡುತ್ತಿದ್ದಾರೆ: ಮಾಜಿ ಸಿಎಂ ಕುಮಾರಸ್ವಾಮಿ ಗರಂ

27/06/2022, 23:13

ಬೆಂಗಳೂರು(reporterkarnataka.com): ಬೆಂಗಳೂರು ನಿರ್ಮಾತೃರಾದ ಕೆಂಪೇಗೌಡರು ನಗರದ ಉತ್ತಮ ಭವಿಷ್ಯಕ್ಕಾಗಿ ಕಟ್ಟಿದಂತಹ ಕೆರೆಗಳು ಹಾಗೂ ರಾಜಕಾಲುವೆಗಳನ್ನು ನುಂಗಿ ನೀರು ನಾಲ್ಕೈದು ಕೆಜಿ ಅಕ್ಕಿ ನೀಡಿ ಪೋಸು ಕೊಡುತ್ತಿದ್ದಾರೆ. ಜುಲೈ ‌ 1ರಿಂದ ಪ್ರಾರಂಭವಾಗುವ ಜನತಾ ಯಾತ್ರೆಯಲ್ಲಿ ಬೆಂಗಳೂರು ನಗರಕ್ಕೆ ನಮ್ಮ ಕೊಡುಗೆಗಳು ಹಾಗೂ ನಗರದ ಜನರ ತೆರಿಗೆ ಹಣದ ಲೂಟಿ ಹೊಡೆದು ಎಸಗಿರುವ ಅಕ್ರಮಗಳನ್ನು ಜನರ ಮುಂದೆ ಇಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಹೇಳಿದರು. 

ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಆರ್‌.ಟಿ ನಗರದ ಮೈದಾನದಲ್ಲಿ ಜಾತ್ಯತೀತ ಜನತಾದಳ ಬೆಂಗಳೂರು ನಗರ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಡಾ. ಸಯ್ಯದ್‌ ಮೋಹಿದ್‌ ಅಲ್ತಾಫ್‌ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತೋತ್ಸವಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ನಾಡಪ್ರಭುಗಳು ಬಹಳ ದೂರದೃಷ್ಟಿ ಇಟ್ಟುಕೊಂಡು ಬೆಂಗಳೂರು ನಗರವನ್ನು ಕಟ್ಟಿದ್ದರು. ಕೆರೆಕಟ್ಟೆಗಳನ್ನು ಕಟ್ಟಿ ಇಡೀ ನಗರವನ್ನು ಜಲಶ್ಯಾಮಲಗೊಳಿಸಿದ್ದರು. ಆದರೆ, ಇಂದು ಭೂಗಳ್ಳರು ಸಾವಿರಾರು ಕೆರೆಗಳನ್ನು ತಮ್ಮ ಸ್ವಾರ್ಥಕ್ಕೋಸ್ಕರ ನುಂಗಿ ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಿಸಿಕೊಂಡು ಮೆರೆಯುತ್ತಿದ್ದಾರೆ. ಮಳೆ ಬಂದಂತಹ ಸಂದರ್ಭದಲ್ಲಿ ಕೆರೆಗಳಲ್ಲಿ ನೀರು ತುಂಬದೆ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಬಡವರ ಮನೆಗಳಿಗೆ ನೀರು ನುಗ್ಗುತ್ತದೆ. ಭೂ ದಾಹಕ್ಕೆ ಬೆಂಬಲ ಕೊಟ್ಟಿರುವುದು ಸರಕಾರವನ್ನು ಆಳಿರುವ ರಾಜಕಾರಣಿಗಳು ಎನ್ನುವುದನ್ನ ನೋವಿನಿಂದ ಹೇಳುತ್ತೇನೆ. ಬೆಂಗಳೂರು ನಗರ ಅಭಿವೃದ್ದಿ ಹೆಸರಿನಲ್ಲಿ ರಾಜಕಾರಣಿಗಳು ಕೋಟ್ಯಾಂತರ ರೂಪಾಯಿಗಳನ್ನು ಲೂಟಿ ಮಾಡಿ ಚುನಾವಣೆ ಸಂಧರ್ಭದಲ್ಲಿ ಓಲೈಸುಲು ಮುಂದಾಗುತ್ತಾರೆ. ಇಂತಹ ರಾಜಕಾರಣಿಗಳಿಗೆ ಪ್ರೊತ್ಸಾಹ ನೀಡುವುದನ್ನ ನಿಲ್ಲಿಸದಿದ್ದಲ್ಲಿ ಸ್ವಾತಂತ್ರ್ಯ ಬಂದು ನೂರು ವರ್ಷಗಳಾದರೂ ಜೀವನ ಹೀಗೇ ಇರುತ್ತದೆ ಎಂದರು. 


ಜುಲೈ ‌ 1ರಿಂದ ಬೆಂಗಳೂರು ನಗರದಲ್ಲಿ ಜನತಾ ಯಾತ್ರೆಯನ್ನು ಪ್ರಾರಂಭಿಸಲಿದ್ದೇವೆ. 15 ವಾಹನಗಳ ಮೂಲಕ ಪ್ರತಿಯೊಂದು ವಾರ್ಡ್‌ ಮತ್ತು ರಸ್ತೆಗಳಿಗೂ ತಲುಪಲಿದ್ದೇವೆ. ಬೆಂಗಳೂರು ನಗರಕ್ಕೆ ಜೆಡಿಎಸ್‌ ಪಕ್ಷ ನೀಡಿರುವ ಕೊಡುಗೆಯನ್ನು ಸಾರಲಿದ್ದೇವೆ. ಹಾಗೆಯೇ, ಉತ್ತದಾಯಿತ್ವ ಇಲ್ಲದೇ ಜನರ ತೆರಿಗೆ ಹಣವನ್ನು ಲೂಟಿ ಮಾಡಿರುವ ಜನರ ನಡೆಸಿರುವ ಅನ್ಯಾಯ ಅಕ್ರಮಗಳ ಬಗ್ಗೆಯೂ ಜನರಿಗೆ ತಿಳುವಳಿಕೆ ನೀಡಲಿದ್ದೇವೆ ಎಂದರು. 

ಒಂದು ಬಾರಿ ಸ್ವತಂತ್ರವಾಗಿ ಆಡಳಿತ ನಡೆಸಲು ನಮ್ಮ ಪಕ್ಷಕ್ಕೆ ಅನುವು ಮಾಡಿಕೊಡಿ. ಇದರಿಂದ ಸ್ವತಂತ್ರವಾಗಿ ಅಭಿವೃದ್ದಿಯ ಹಲವಾರು ನಿರ್ಧಾರಗಳನ್ನು ತಗೆದುಕೊಳ್ಳಲು ಹಾಗೂ ಅದನ್ನು ಅನುಷ್ಠಾನಗಳಿಸಲು ಸಾಧ್ಯ ಎಂದರು. 

ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಮಾತನಾಡಿ, ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಡಾ. ಸಯ್ಯದ್‌ ಮೋಹಿದ್‌ ಅಲ್ತಾಪ್‌ ಅವರನ್ನ ಘೋಷಣೆ ಮಾಡಿದರು. ಒಬ್ಬ ಉತ್ತಮ ವಿದ್ಯಾವಂತ ಅಭ್ಯರ್ಥಿಗೆ ಮತ ನೀಡುವಂತೆ ಜನರಲ್ಲಿ ಕೋರಿದರು. 

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ್, ಬೆಂಗಳೂರು ನಗರ ಜೆಡಿಎಸ್‌ ಅಧ್ಯಕ್ಷ ಪ್ರಕಾಶ್‌, ಎಸ್‌ ರುದ್ರಪ್ಪ‌, ಬಿಬಿಎಂಪಿ ಅಭ್ಯರ್ಥಿಗಳಾದ ಹಕೀಂ ಬಾಬು, ವಾರ್ಡ್‌ ನಂ 22 ರ ಮಾಜಿ ಬಿಬಿಎಂಪಿ ಸದಸ್ಯರಾದ ರಾಜಶೇಖರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಸಲ್ಲಿಸಿರುವವರಿಗೆ ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು