9:31 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವ: ವಿಧಾನ ಪರಿಷತ್ತು ಸಭಾಪತಿ ಹೊರಟ್ಟಿ ಅವರಿಂದ ಗೌರವಪೂರ್ಣ ನಮನ

27/06/2025, 21:29

ಬೆಂಗಳೂರು(reporterkarnataka.com): ಸರ್ವಶ್ರೇಷ್ಠ ದಾರ್ಶನಿಕ, ಅಪ್ರತಿಮ ಆಡಳಿತಗಾರ, ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಅವರ ದೂರದೃಷ್ಟಿಯುಳ್ಳ ಕ್ರಾಂತಿಕಾರಕ ಆಡಳಿತ ವೈಖರಿಯಿಂದ ಇಂದು ಬೆಂಗಳೂರು ಇಡೀ ಜಗತ್ತಿನ ಗಮನ ಸೆಳೆಯುತ್ತಿದೆ ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಸಂದೇಶದಲ್ಲಿ ಬಣ್ಣಿಸಿದ್ದಾರೆ.
ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಉತ್ಸವದ ಅಂಗವಾಗಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ನಮನ ಸಲ್ಲಿಸಿ ಮಾತನಾಡಿದ ಅವರು, ಹಂಪಿಯ ವೈಭವ ಕಂಡು ಬೆರಗಾಗಿದ್ದ ಕೆಂಪೇಗೌಡರು ದೂರದೃಷ್ಟಿಯಿಂದ ನಿರ್ಮಿಸಿರುವ ಬೆಂಗಳೂರು ನಗರ ಇಂದು ಬಹುವಾಗಿ ಬೆಳೆದು ಜಾಗತಿಕ ನಕ್ಷೆಯಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನ ಪಡೆದುಕೊಂಡಿದೆ. ಕೆಂಪೇಗೌಡರು ನಿರ್ಮಿಸಿರುವ ಕೆರೆಗಳು, ದೇವಾಲಯಗಳು, ಕೋಟೆ ಕೊತ್ತಲಗಳು ಇಂದಿಗೂ ನಮ್ಮ ಕಣ್ಣ ಮುಂದಿವೆ. ಬೆಂದಕಾಳೂರು ಎಂಬ ನಾಮದಿಂದ ಕರೆಯುತ್ತಿದ್ದ ನಗರ ಇಂದು ಬೆಂಗಳೂರು ನಗರವಾಗಿ ರೂಪುಗೊಂಡಿದ್ದು, ಕೆಂಪೇಗೌಡರ ದೂರದೃಷ್ಟಿಯ ಫಲ ಎಂದು ಶ್ರೀ ಬಸವರಾಜ ಹೊರಟ್ಟಿ ಅಭಿಮಾನದಿಂದ ತಿಳಿಸಿದರು.
ಕೆಂಪೇಗೌಡರ ಬದುಕು, ಹೋರಾಟ ಅವರ ದೂರದೃಷ್ಟಿಯುಳ್ಳ ಪರಿಣಾಮಕಾರಿ ಆಡಳಿತ ಇಂದಿಗೂ ನಮ್ಮೆಲ್ಲರಿಗೂ ಪ್ರೇರಣೆಯಾಗಿದೆ, ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಹ ಕೆಂಪೇಗೌಡರ ಅನುಯಾಯಿಯಾಗಿದ್ದು, ಅವರಿಂದ ಪ್ರೇರಣೆ ಪಡೆದು ಕೆಂಪೇಗೌಡರ ಕನಸಿನ ಬೆಂಗಳೂರು ನಗರದ ನಿರ್ಮಾಣ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದು ಶ್ಲಾಘನೀಯ, ಕೆಂಪೇಗೌಡರ ಹೆಸರನ್ನು ಸ್ವತಃ ತಮ್ಮ ಮಗನಿಗೆ ನಾಮಕರಣ ಮಾಡಿರುವ ಡಿ.ಕೆ. ಶಿವಕುಮಾರ್, ಕೆಂಪೇಗೌಡರ ಬಗೆಗೆ ತಮಗಿರುವ ಭಕ್ತಿ, ಶ್ರದ್ದೆ ಹಾಗೂ ಬದ್ಧತೆಯನ್ನು ಸಾಕ್ಷೀಕರಿಸಿದ್ದಾರೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅಭಿಮಾನ ವ್ಯಕ್ತಪಡಿಸಿದರು.
ಸಾವಿರ ಕೆರೆಗಳ ನಾಡು ಎಂದು ಖ್ಯಾತಿ ಪಡೆದಿರುವ ಬೆಂಗಳೂರನ್ನು ವ್ಯವಸ್ಥಿತ ನಗರವನ್ನಾಗಿ ಬೆಳೆಸುವ ಕನಸು ಹೊತ್ತಿದ್ದ ಕೆಂಪೇಗೌಡರ ದೂರದರ್ಶಿತ್ವ ಇಂದು ನಮಗೆಲ್ಲರಿಗೂ ಮೇಲ್ಪಂಕ್ತಿಯಾಗಿದ್ದು ಕೆಂಪೇಗೌಡರ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕಾಗಿರುವುದು ಇಂದಿನ ತುರ್ತು ಅಗತ್ಯವಾಗಿದೆ, ಬೆಂಗಳೂರಿನ ಸೌಂದರ್ಯವನ್ನು ಉಳಿಸಿ ಅಚ್ಚುಕಟ್ಟಾಗಿ ಬೆಳೆಸುವ ಮೂಲಕ ಕೆಂಪೇಗೌಡರ ಕನಸನ್ನು ನನಸನ್ನಾಗಿಸುವುದು ನಾವೆಲ್ಲರೂ ನಾಡಪ್ರಭುಗಳಿಗೆ ಸಲ್ಲಿಸುವ ನೈಜ ಗೌರವವಾಗಿದೆ. ಈ ನಿಟ್ಟಿನಲ್ಲಿ ಇಂದಿನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು ಮುಂದಡಿ ಇಟ್ಟಿದ್ದಾರೆ ಎನ್ನುವ ವಿಶ್ವಾಸ ನನ್ನದಾಗಿದೆ ಎಂದು ಬಸವರಾಜ ಹೊರಟ್ಟಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು