3:20 AM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಮಹಾದ್ರೋಹ; ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

23/07/2024, 20:48

ಮಂಗಳೂರು(reporterkarnataka.com): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಎನ್‌ಡಿಎ ಎಲೈನ್ಸ್ ಬಜೆಟ್ ರೀತಿ ಇದೆ. ಸರ್ಕಾರವನ್ನು ಬಚಾವ್ ಮಾಡುವ ಉದ್ದೇಶದಿಂದ ಮಿತ್ರ ಪಕ್ಷಗಳ ಓಲೈಕೆಗಾಗಿ ಸುಳ್ಳು ಭರವಸೆಗಳನ್ನು ನೀಡಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.
ಸರ್ಕಾರ ರಚನೆಗೆ ಸಹಕರಿಸಿದ ಆಂಧ್ರಪ್ರದೇಶ, ಬಿಹಾರಕ್ಕೆ ಹೆಚ್ಚು ಅನುದಾನ ನೀಡಲಾಗಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ರಾಜ್ಯಕ್ಕೆ ಕೊಡುಗೆ ಕೊಡುತ್ತಾರೆ ಎಂದು ನಿರೀಕ್ಷೆ ಮಾಡಲಾಗಿತ್ತಾದರೂ, ರಾಜ್ಯಕ್ಕೆ ಏನೂ ಸಿಕ್ಕಿಲ್ಲ. ಕರ್ನಾಟಕಕ್ಕೆ ಎಂದಿನಂತೆ ಕೇಂದ್ರ ಬಿಜೆಪಿ ಸರ್ಕಾರ ಮಲತಾಯಿ ಧೋರಣೆ ತೋರುವುದನ್ನು ಮುಂದುವರಿಸಿದೆ. ವಿಶೇಷವಾಗಿ ಕಾಂಗ್ರೆಸ್‌ ಆಡಳಿತದಲ್ಲಿರುವ ರಾಜ್ಯಗಳಿಗೆ ಅನ್ಯಾಯವಾಗಿದೆ ಎಂದಿದ್ದಾರೆ.
ರೈತ ವರ್ಗ, ಬಡ ವರ್ಗಕ್ಕೆ ಯಾವುದೂ ಪ್ರಯೋಜನ ಆಗಿಲ್ಲ, ರೈತರಿಗೆ ಕನಿಷ್ಟ ಬೆಂಬಲ ಬೆಲೆ ಕೊಟ್ಟಿಲ್ಲ. ಮೀನುಗಾರರ ಬಗ್ಗೆಯೂ ಏನೂ ಘೋಷಣೆ ಇಲ್ಲ. ಸಾಮಾನ್ಯ ವ್ಯಕ್ತಿಯ ಆದಾಯವನ್ನು ಸುಧಾರಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ಉಲ್ಲೇಖವಿಲ್ಲ.. ಕೈಗಾರಿಕಾ, ರೈಲ್ವೆ ಕೃಷಿ ಕ್ಷೇತ್ರಗಳಿಗೆ ಯಾವುದೆ ಕೊಡುಗೆ ಘೋಷಿಸಿಲ್ಲ. ಒಂದೇ ಒಂದು ಸಂತೋಷದ ವಿಷಯವೆಂದರೆ ಕಾಂಗ್ರೆಸ್ 2024ರ ಚುನಾವಣೆ ಸಂದರ್ಭ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದ ಯೋಜನೆಯನ್ನು ಈ ಬಜೆಟ್‌ನಲ್ಲಿ ಪ್ರಸ್ತಾಪಿಸಿದ್ದು. ಒಟ್ಟಾಗಿ ಇದೊಂದು ದೋಸ್ತಿಗಳಿಗೆ ಖುಷಿಪಡಿಸುವ ಆಯವ್ಯಯ ಎಂದೇಳಬೇಕು ಎಂದು ಪದ್ಮರಾಜ್ ಪ್ರತಿಕ್ರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು