12:12 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಕೇಸರಿಮಯವಾಗಿ ಕಂಗೊಳಿಸುತ್ತಿರುವ ತುಮಕೂರು ನಗರ; ಬಿಗಿ ಭದ್ರತೆ

31/03/2022, 22:58

ತುಮಕೂರು(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 1ಕ್ಕೆ ತುಮಕೂರು ಭೇಟಿ ನೀಡಲಿದ್ದು, ಇಡೀ ನಗರ ಕೇಸರಿ ಬಣ್ಣದಿಂದ ಕಂಗೊಳಿಸುತ್ತಿದೆ.

ಅಮಿತ್ ಶಾ ಅವರು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದು, ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಹುಟ್ಟು ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶಾ ಭೇಟಿಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರಕಾರ ತುಮಕೂರು ನಗರದಲ್ಲಿ ಭಾರಿ ಸಿದ್ಧತೆ ನಡೆಸಿದೆ. ಪುರ ಪ್ರವೇಶಿಸುವ ಪ್ರದೇಶದಲ್ಲಿ ಕೇಸರಿಮಯ ಮಹಾದ್ವಾರ ನಿರ್ಮಿಸಲಾಗಿದೆ ಅದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಅವರ ಕಟೌಟ್ ಅಳವಡಿಸಲಾಗಿದೆ. ತುಮಕೂರಿನ ಪ್ರಮುಖ ವೃತ್ತಗಳನ್ನು ಕೇಸರಿ ಬಣ್ಣದಿಂದ ಶೃಂಗರಿಸಲಾಗಿದೆ.

ಶಾ ಅವರು ತುಮಕೂರು ಭೇಟಿ ಜತೆ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನವೇ ಆಗಮಿಸುತ್ತಿರುವಂತ ಅವರು, ಕೇಸರಿ ಪಕ್ಷದ ಪ್ರಚಾರವನ್ನು ಚುರುಕುಗೊಳಿಸೋದಕ್ಕೆ ಚಾಲನೆ ನೀಡಲಿದ್ದಾರೆ ಎನ್ನಲಾಗುತ್ತಿದೆ.


ಜೊತೆಗೆ ಸಹಕಾರಿ ರಂಗದಲ್ಲಿ ಹಲವಾರು ಸುಧಾರಣೆಗಳನ್ನು ತರಬೇಕೆಂಬ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ಷೀರ ಅಭಿವೃದ್ಧಿ ಬ್ಯಾಂಕ್ ಪ್ರಾರಂಭ ಮಾಡಲು ಉದ್ದೇಶಿಸಿದೆ. ಅದರ ಲಾಂಛನದ ಉದ್ಘಾಟನೆ ಮಾಡಲು ಬೃಹತ್ ಸಭೆ ಏರ್ಪಾಡು ಮಾಡಲಾಗಿದೆ. ಕ್ಷೀರ ಕ್ಷೇತ್ರದಲ್ಲಿ ಆರ್ಥಿಕ ಅಭಿವೃದ್ಧಿಗೆ ಇಂಬು ನೀಡಿ ಆರ್ಥಿಕ ಕ್ರಾಂತಿಯಾಗಲಿದೆ. ಇದರಿಂದ ರೈತರ ಆದಾಯ ದೊಡ್ಡ ಪ್ರಮಾಣದಲ್ಲಿ ಹೆಚ್ಚಾಗಲಿದೆ. ರೈತರಿಗೆ ಆರ್ಥಿಕ ಸಹಾಯ ದೊರೆಯಲು ನೆರವಾಗಲಿದೆ. ಲಾಂಛನ ಹಾಗೂ ಯಾಶಸ್ವಿನಿ ಯೋಜನೆಯ ಉದ್ಘಾಟನೆಯನ್ನು ಅಮಿತ್ ಷಾ ಅವರು ನೆರವೇರಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು