9:38 PM Friday20 - December 2024
ಬ್ರೇಕಿಂಗ್ ನ್ಯೂಸ್
ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು… ಅರಣ್ಯ ಹಕ್ಕು ಕಾಯ್ದೆಯಡಿ ಇದುವರೆಗೆ 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಣೆ: ಸದನದಲ್ಲಿ ಸಿಎಂ… ರಾಜ್ಯದಲ್ಲಿ ಅನಧಿಕೃತವಾಗಿ ವಾಸವಿದ್ದ 24 ಪಾಕ್, 159 ಬಾಂಗ್ಲಾದೇಶ ಮೂಲದವರ ಬಂಧನ: ಗೃಹ… ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ವಿಧೇಯಕ 2024ಕ್ಕೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಗೃಹಲಕ್ಷ್ಮೀಯರ ಜತೆ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: ಫಲಾನುಭವಿಗಳು ಫುಲ್… ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಂದು ವರ್ಷ: ಪ್ರಧಾನಿ ಮೋದಿಯ ಭೇಟಿಯಾದ ವಿಜಯೇಂದ್ರ

ಇತ್ತೀಚಿನ ಸುದ್ದಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಿಡಿದಿದ್ದ ಕಾಂಗ್ರೆಸ್: ರಾಜೀನಾಮೆ ಆಗ್ರಹಿಸಿ ನಂಜನಗೂಡಿನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ

20/12/2024, 20:47

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಂಜನಗೂಡಿನಲ್ಲಿ ನಂಜನಗೂಡು ತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಹೆದ್ದಾರಿ ತಡೆದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.


ನಂಜನಗೂಡು ನಗರದ ಹುಲ್ಲಹಳ್ಳಿ ವೃತ್ತದಲ್ಲಿ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮಾಯಿಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿ, ರಾಷ್ಟ್ರೀಯ ಹೆದ್ದಾರಿ ತಡೆದು ಅಮಿತ್ ಶಾ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ರವರು ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಈ ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಬೇಕು. ದೇಶದಿಂದ ಗಡಿಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿ ತಹಸಿಲ್ದಾರ್ ರವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ ಪರಿಣಾಮ ಕೆಲ ಸಮಯ ಕಿಲೋ ಮೀಟರ್ ದೂರದ ತನಕ ಟ್ರಾಫಿಕ್ ಜಾಮ್ ಕಂಡು ಬಂತು.
ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ವಿವಿಧ ಪರ ಸಂಘಟನೆಗಳ ಮುಖಂಡರುಗಳು ಈ ಸಂದರ್ಭ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು