3:03 PM Wednesday19 - November 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ…

ಇತ್ತೀಚಿನ ಸುದ್ದಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಏ.1ರಂದು ರಾಜ್ಯಕ್ಕೆ ಭೇಟಿ: ಬಿಜೆಪಿಯಲ್ಲಿ ಭಾರಿ ಸಂಚಲನ

26/03/2022, 23:22

ಬೆಂಗಳೂರು(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 1ಕ್ಕೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯ ಬಿಜೆಪಿಯಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಶಾ ಅವರು ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಏಪ್ರಿಲ್ 1ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನವೇ ಆಗಮಿಸುತ್ತಿರುವಂತ ಅವರು, ಕೇಸರಿ ಪಕ್ಷದ ಪ್ರಚಾರವನ್ನು ಚುರುಕುಗೊಳಿಸೋದಕ್ಕೆ ಚಾಲನೆ ನೀಡಲಿದ್ದಾರೆ ಎನ್ನಲಾಗುತ್ತಿದೆ.

ಇನ್ನೂ ಶಿವಕುಮಾರ ಸ್ವಾಮೀಜಿಗಳ 116ನೇ ಜಯಂತಿಯ ಕಾರ್ಯಕ್ರಮದಲ್ಲಿಯೂ ಭಾಗವಹಿಸಲಿದ್ದಾರೆ. ಜೊತೆಗೆ ಸಹಕಾರಿ ರಂಗದಲ್ಲಿ ಹಲವಾರು ಸುಧಾರಣೆಗಳನ್ನು ತರಬೇಕೆಂಬ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ಷೀರ ಅಭಿವೃದ್ಧಿ ಬ್ಯಾಂಕ್ ಪ್ರಾರಂಭ ಮಾಡಲು ಉದ್ದೇಶಿಸಿದೆ. ಅದರ ಲಾಂಛನದ ಉದ್ಘಾಟನೆ ಮಾಡಲು ಬೃಹತ್ ಸಭೆ ಏರ್ಪಾಡು ಮಾಡಲಾಗುತ್ತಿದೆ. ಕ್ಷೀರ ಕ್ಷೇತ್ರದಲ್ಲಿ ಆರ್ಥಿಕ ಅಭಿವೃದ್ಧಿಗೆ ಇಂಬು ನೀಡಿ ಆರ್ಥಿಕ ಕ್ರಾಂತಿಯಾಗಲಿದೆ. ಇದರಿಂದ ರೈತರ ಆದಾಯ ದೊಡ್ಡ ಪ್ರಮಾಣದಲ್ಲಿ ಹೆಚ್ಚಾಗಲಿದೆ. ರೈತರಿಗೆ ಆರ್ಥಿಕ ಸಹಾಯ ದೊರೆಯಲು ನೆರವಾಗಲಿದೆ. ಲಾಂಛನ ಹಾಗೂ ಯಾಶಸ್ವಿನಿ ಯೋಜನೆಯ ಉದ್ಘಾಟನೆಯನ್ನು ಅಮಿತ್ ಷಾ ಅವರು ನೆರವೇರಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು