ಇತ್ತೀಚಿನ ಸುದ್ದಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಡಿ. 28ರಂದು ಯಡಿಯಾಲದಲ್ಲಿ ಪ್ರತಿಭಟನೆ: ದಸಂಸ
24/12/2024, 15:53

ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ಡಾ. ಅಂಬೇಡ್ಕರ್ ಅವರ ಬಗ್ಗೆ ಅಸಹನೆ ಮತ್ತು ದ್ವೇಷದ ಮಾತುಗಳನ್ನಾಡಿರುವ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಿ ದೇಶದ್ರೋಹ ಮತ್ತು ಯುಎಪಿಎ ಕಾಯ್ದೆಯಡಿ ಬಂಧಿಸುವಂತೆ ಒತ್ತಾಯಿಸಿ ಡಿಸೆಂಬರ್ 28 ರಂದು ನಂಜನಗೂಡು ತಾಲೂಕಿನ ಯಡಿಯಾಲ ಗ್ರಾಮದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಮುಖಂಡರಾದ ಕುಮಾರ್ ಕಳಲೆ ಹಾಗೂ ಕೃಷ್ಣಮೂರ್ತಿ ಕಂದೇಗಾಲ ಹೇಳಿದರು.
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ದೇಶದ ಕಾನೂನು ವ್ಯವಸ್ಥೆ ಕಾಪಾಡುವ ಗೃಹ ಮಂತ್ರಿಯಾಗಿದ್ದುಕೊಂಡೇ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಇಂಥವರ ಬೆಂಬಲಕ್ಕೆ ಪಿಎಂ ನರೇಂದ್ರ ಮೋದಿ ಹಾಗೂ ಬಿಜೆಪಿ ನಿಂತಿರುವುದನ್ನು ನಮ್ಮ ದಲಿತ ಸಂಘರ್ಷ ಸಮಿತಿ ಖಂಡಿಸುತ್ತದೆ ಎಂದರು.
ಕೂಡಲೇ ಅಮಿತ್ ಶಾ ಅವರನ್ನು ಬಂಧಿಸಿ ಅವರನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ಡಿಸೆಂಬರ್ 28ರಂದು ದಲಿತಪರ, ರೈತಪರ, ಪ್ರಗತಿಪರ ಸಂಘಟನೆಗಳು ಸೇರಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾಗೋಷ್ಠಿಯ ಬಗ್ಗೆ ನುಡಿದರು.
ಶಿವರಾಜು, ಪುಟ್ಟ ಬುದ್ಧಿ, ಮಹದೇವಸ್ವಾಮಿ, ಕೃಷ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.