3:07 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕೇಂದ್ರ ಸಚಿವ ಕುಮಾರಸ್ವಾಮಿಗೆ 66: ಉಪ ರಾಷ್ಟ್ರಪತಿ, ಪ್ರಧಾನಿ, ಸ್ಪೀಕರ್ ಶುಭ ಹಾರೈಕೆ: ವಿಶೇಷಚೇತನ ಮಕ್ಕಳ ಶಾಲೆಗೆ ಭೇಟಿ

16/12/2024, 21:07

*ನಿತಿನ್ ಗಡ್ಕರಿ, ಶಿವರಾಜ್ ಸಿಂಗ್ ಚೌಹಾಣ್, ಯೋಗಿ ಆದಿತ್ಯನಾಥ್, ಪ್ರಮೋದ್ ಸಾವಂತ್, ಹಿಮಂತ್ ಬಿಸ್ವಾಸ್, ಪವನ್ ಕಲ್ಯಾಣ್ ಸೇರಿ ಅನೇಕ ಗಣ್ಯರ ಶುಭಾಶಯ*

*ಬಿಎಸ್ವೈ, ಬೊಮ್ಮಾಯಿ ಸೇರಿ ಅನೇಕ ಹಿರಿಯರಿಂದ ಹಾರೈಕೆ*

ಹೊಸದಿಲ್ಲಿ(reporterkarnataka.com): 66ನೇ ವರ್ಷಕ್ಕೆ ಸೋಮವಾರ ಕಾಲಿಟ್ಟ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಉಪ ರಾಷ್ಟ್ರಪತಿ ಜಗದೀಪ ಧನಕರ್, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಷ್ಟ್ರದ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.


ಉಪ ರಾಷ್ಟ್ರಪತಿ ಜಗದೀಪ ಧನಕರ್ ಅವರು ಬೆಳಗ್ಗೆ ಸಚಿವರಿಗೆ ದೂರವಾಣಿ ಕರೆ ಮಾಡಿ ಶುಭ ಕೋರಿದರು. ಈ ವೇಳೆ ಸಚಿವರು ಉಪ ರಾಷ್ಟ್ರಪತಿಗಳಿಗೆ ಧನ್ಯವಾದಗಳನ್ನು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಸಚಿವರಿಗೆ ಭಾನುವಾರವೇ ಜನ್ಮದಿನ ಶುಭಾಶಯ ಪತ್ರ ಕಳಿಸಿ ಶುಭ ಕೋರಿದ್ದರು. ಸೋಮವಾರ ಬೆಳಗ್ಗೆಯೂ ಪ್ರಧಾನಿಗಳು ಸಚಿವರಿಗೆ ಶುಭ ಕೋರಿದ್ದಾರೆ.
ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು ಹಾಗೂ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಶಿವರಾಜ್ ಸಿಂಗ್ ಚೌಹಾಣ್, ಪ್ರಹ್ಲಾದ್ ಜೋಶಿ, ಗಜೇಂದ್ರ ಸಿಂಗ್ ಶೇಖಾವತ್, ಜೋಲ್ ಒರಂ, ಡಾ.ವೀರೇಂದ್ರ ಕುಮಾರ್, ಶರ್ಭಾನಂದ ಸೋನಾವಾಲ್, ರಾಮ್ ಮೋಹನ್ ನಾಯ್ಡು, ಮನೋಹರ್ ಲಾಲ್, ಧರ್ಮೇಂದ್ರ ಪ್ರಧಾನ್, ಪಿಯೂಷ್ ಗೋಯಲ್, ಡಾ.ಎಸ್.ಜೈಶಂಕರ್,ಕೇಂದ್ರದ ರಾಜ್ಯ ಸಚಿವರಾದ ವಿ.ಸೋಮಣ್ಣ, ಶ್ರೀನಿವಾಸ ಭೂಪತಿರಾಜು ವರ್ಮ, ಕಿಶನ್ ರೆಡ್ಡಿ ಅವರು ಕೇಂದ್ರ ಸಚಿವರಿಗೆ ಶುಭ ಕೋರಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾಸ್ ಸರ್ಮ, ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಹೆಚ್ಡಿಕೆ ಅವರಿಗೆ ಹಾರೈಸಿದ್ದಾರೆ.
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಡಾ.ಕೆ.ಸುಧಾಕರ್, ಸಂಸದ ಬಿ.ವೈ.ರಾಘವೇಂದ್ರ, ತೇಜಸ್ವಿ ಸೂರ್ಯ, ರಾಜ್ಯದ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಸೇರಿದಂತೆ ಅನೇಕರು ಸಚಿವರಿಗೆ ಜನ್ಮದಿನ ಶುಭಾಶಯ ಕೋರಿದ್ದಾರೆ.
*ತಂದೆ ಆಶೀರ್ವಾದ ಪಡೆದ ಕೇಂದ್ರ ಸಚಿವರು:* ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಎಕ್ಸ್ ಖಾತೆಯ ಮೂಲಕ ಬೆಳಗ್ಗೆಯೇ ಸಚಿವರನ್ನು ಆಶೀರ್ವದಿಸಿದ್ದರು. “ನನ್ನ ಪುತ್ರ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಪ್ರೀತಿಪೂರ್ವಕ ಶುಭಾಶಯಗಳು. ಭಗವಂತ ನಿಮಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಿ ಇನ್ನಷ್ಟು ದೀರ್ಘ ಕಾಲ ಜನಸೇವೆ ಮಾಡುವ ಶಕ್ತಿ, ಚೈತನ್ಯ ನೀಡಲಿ ಎಂದು ಹಾರೈಸುತ್ತೇನೆ” ಎಂದು ತಿಳಿಸಿದ್ದಾರೆ.
*ಶಿವನ ದೇಗುಲದಲ್ಲಿ ಪೂಜೆ, ವಿಶೇಷಚೇತನ ಮಕ್ಕಳ ಶಾಲೆಗೆ ಭೇಟಿ:*
ಸೋಮವಾರ ಬೆಳಗ್ಗೆಯೇ ಸಚಿವ ಕುಮಾರಸ್ವಾಮಿ ಅವರು ನವದೆಹಲಿಯಲ್ಲಿರುವ ಹೌಜ್ ಕಾಸ್ ನಲ್ಲಿರುವ ಶ್ರೀ ಶಿವ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಅಭಿಷೇಕ ಮತ್ತು ಪೂಜೆಯಲ್ಲಿ ಪಾಲ್ಗೊಂಡ ಸಚಿವರು, ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಆರ್.ಕೆ.ಪುರಂ ಸೆಕ್ಟರ್ 5ರಲ್ಲಿರುವರಾಷ್ಟ್ತ್ರೀಯ ವಿಶೇಷ ಚೇತನ ಮಕ್ಕಳ ಶಾಲೆಗೆ (National association for blind) ತೆರಳಿ ಮಕ್ಕಳ ಜತೆ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಸಚಿವರು ಮಕ್ಕಳಿಗೆ ಸ್ವೆಟರ್ ಗಳನ್ನು, ಸಿಹಿಯನ್ನು ಹಂಚಿ ಕೆಲ ಸಮಯ ಅಲ್ಲಿಯೇ ಕಳೆದರು.

ಇತ್ತೀಚಿನ ಸುದ್ದಿ

ಜಾಹೀರಾತು