ಇತ್ತೀಚಿನ ಸುದ್ದಿ
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಜ.2ರಂದು ಮಂಗಳೂರಿಗೆ: ಸೂರ್ಯ-ಘರ್ ಕಾರ್ಯಾಗಾರ ಉದ್ಘಾಟನೆ
31/12/2024, 20:39
ಮಂಗಳೂರು(reporterkarnataka.com):ಜನವರಿ 2ರಂದು ಕೇಂದ್ರ ನವೀಕರಿಸಬಹುದಾದ ಇಂಧನಗಳ ಸಚಿವ ಪ್ರಹ್ಲಾದ ಜೋಶಿ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಮಂತ್ರಿ ಸೂರ್ಯ-ಘರ್ ಯೋಜನೆಯ ಕಾರ್ಯಾಗಾರವನ್ನು ಉದ್ಘಾಟಿಸಿ ಯೋಜನೆಯ ಅನುಷ್ಠಾನದ ಪ್ರಗತಿ ಕುರಿತು ಮಾಹಿತಿ ಪಡೆಯಲಿದ್ದಾರೆ. ಈಗಾಗಲೇ ಸೋಲಾರ್ ಯೋಜನೆ ಅಳವಡಿಸಿರುವ ಗ್ರಾಹಕರ ಅನುಭವವನ್ನು ತಿಳಿದುಕೊಳ್ಳಲಿದ್ದಾರೆ ಎಂದು ಸಂಸದರು ತಿಳಿಸಿದರು.
ಈ ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದರು.