ಇತ್ತೀಚಿನ ಸುದ್ದಿ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ನಾ.ಡಿಸೋಜ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಂತಾಪ
06/01/2025, 13:57
ಬೆಂಗಳೂರು(reporterkarnataka.com): ಹಿರಿಯ ಸಾಹಿತಿ ನಾ.ಡಿಸೋಜ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರಾಗಿದ್ದ ನಾ.ಡಿಸೋಜ ಅವರು ಮಡಿಕೇರಿಯಲ್ಲಿ ನಡೆದ 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಶರಾವತಿ ಮುಳುಗಡೆ ಪ್ರದೇಶದ ಹಿನ್ನೆಲೆ ಕಥನವಿದ್ದ ಇವರ ‘ದ್ವೀಪ’ ಕಾದಂಬರಿ ಸಿನಿಮಾ ಆಗಿತ್ತು. ಮಂಗಳೂರಿನ ಸಂದೇಶ ಪ್ರತಿಷ್ಠಾನವು ಪ್ರತಿವರ್ಷ ನೀಡುವ ಸಾಧಕರ ಪ್ರಶಸ್ತಿಯ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಅವರು ಕಾರ್ಯ ನಿರ್ವಹಿಸಿದ್ದರು ಎಂದು ತಿಳಿಸಿದ್ದಾರೆ.
ಅವರ ಕುಟುಂಬಸ್ಥರು, ಬಂಧುಗಳು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.