9:55 AM Friday8 - August 2025
ಬ್ರೇಕಿಂಗ್ ನ್ಯೂಸ್
ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ… ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ…

ಇತ್ತೀಚಿನ ಸುದ್ದಿ

ಕೇಂದ್ರ ಸಂಪುಟ ಶೀಘ್ರ ವಿಸ್ತರಣೆ: ಡಿ.ವಿ. ಸದಾನಂದ ಗೌಡ ಔಟ್?; ಮತ್ಯಾರಿಗೆ ರಾಜ್ಯದಿಂದ ಸಚಿವ ಸ್ಥಾನ?

27/06/2021, 19:48

ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟ ಶೀಘ್ರದಲ್ಲೇ ವಿಸ್ತರಣೆಯಾಗಲಿದ್ದು, ರಾಜ್ಯಕ್ಕೆ ಎರಡು ಸ್ಥಾನ ಕೊಡುವ ಬಗ್ಗೆ ಹಕ್ಕೊತ್ತಾಯ ಕೇಳಿಬರುತ್ತಿದೆ. ಈ ಮಧ್ಯೆ ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಸಂಪುಟದಿಂದ ಕೊಕ್ ನೀಡಿ ಹೊಸ ಮುಖಕ್ಕೆ ಅವಕಾಶ ನೀಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೇಂದ್ರ ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿ ಹಾಗೂ ರೈಲ್ವೆ ಸಹಾಯಕ ಸಚಿವ ಸುರೇಶ್ ಅಂಗಡಿ ನಿಧನ ಹಾಗೂ ಶಿವಸೇನೆ ಮತ್ತು ಅಕಾಲಿದಳದ ಸಚಿವರು ಸಂಪುಟದಿಂದ ನಿರ್ಗಮಿಸಿದ ಬಳಿಕ ಕೇಂದ್ರ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆದಿಲ್ಲ. ಅದಲ್ಲದೆ 2024ರಲ್ಲಿ ಸಂಸತ್ ಚುನಾವಣೆ ಕೂಡ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಂಪುಟ ವಿಸ್ತರಣೆ ಅನಿವಾರ್ಯವಾಗಿದೆ ಎನ್ನಲಾಗಿದೆ.

ಬೆಳಗಾವಿಯ ಸುರೇಶ್ ಅಂಗಡಿ ಅವರ ಸಾವಿನಿಂದ ತೆರನಾದ ಸ್ಥಾನವನ್ನು ಅವರದೇ ಸಮುದಾಯವರಿಗೆ ನೀಡಬೇಕೆಂಬ ಕೂಗು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ನಿಧನರಾದ ಸಿ.ಎಂ. ಉದಾಸೀನ ಅವರ ಪುತ್ರ ಶಿವಕುಮಾರ್ ಉದಾಸಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ಅವರ ಹೆಸರು ಕೇಳಿಬರುತ್ತಿದೆ.

ರಾಜ್ಯ ನಾಯಕತ್ವ ಮುಂದಿನ ವಿಧಾನಸಭೆ ಚುನಾವಣೆ ವರೆಗೆ ಬದಲಾಗುವ ಸಾಧ್ಯತೆ ಕಡಿಮೆ ಇರುವುದರಿಂದ ಶಿವಕುಮಾರ್ ಉದಾಸಿ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಹೆಚ್ಚು ಎನ್ನಲಾಗಿದೆ. ಇಷ್ಟೇ ಅಲ್ಲದೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ ಉಮೇಶ್ ಜಾಧವ್ ಅವರ ಹೆಸರು ಕೂಡ ಇದೆ. ಈ ಮಧ್ಯೆ ಕೇಂದ್ರ ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರನ್ನು ಸಂಪುಟದಿಂದ ಕೈಬಿಡುತ್ತಾರೆ ಎಂಬ ಮಾಹಿತಿ ಇದೆ. ಡಿವಿಎಸ್ ಬದಲು ಹೊಸ ಮುಖಕ್ಕೆ ಅವಕಾಶ ನೀಡುತ್ತಾರೆ ಎನ್ನಲಾಗಿದೆ. ಡಿವಿಎಸ್ ಅವರನ್ನು ಸಂಪುಟದಿಂದ ಕೈಬಿಟ್ಟರೆ ಉಮೇಶ್ ಜಾಧವ್ ಅವರಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗುವ ಬಹುತೇಕ ಸಾಧ್ಯತೆಗಳಿವೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು