9:53 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ

16/02/2024, 21:34

ಮಂಗಳೂರು(reporterkarnataka.com):ಅಗತ್ಯ ವಸ್ತುಗಳ ಬೆಲೆಯೇರಿಕೆ ಇಳಿಸಲು, ದುಡಿಯುವ ಜನರ ಶೋಷಣೆ ತಪ್ಪಿಸಲು, ಕೊಂಡುಕೊಳ್ಳುವ ಸಾಮರ್ಥ್ಯ ಹೆಚ್ಚಿಸಲು,ಉದ್ಯೋಗ ಸೃಷ್ಡಿಸಲು ಆಗ್ರಹಿಸಿ, ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳ ವಿರುದ್ಧ ರೈತ – ಕಾರ್ಮಿಕ – ಕೃಷಿ ಕೂಲಿಕಾರರಿಂದ ಇಂದು ದೇಶಾದ್ಯಂತ ಪ್ರತಿಭಟನೆಯ ಭಾಗವಾಗಿ ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.


ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ ಜೆ.ಬಾಲಕೃಷ್ಣ ಶೆಟ್ಟಿ ಅವರು ಮಾತನಾಡುತ್ತಾ, ನೀತಿ ಆಯೋಗದ ಪರಿಕಲ್ಪನೆಗಳು ಬದಲಾಗಿದ್ದರ ಪರಿಣಾಮ ಇಂದಿನ ಆರ್ಥಿಕ ನೀತಿಗಳು ಉದ್ಯೋಗರಹಿತವಾಗಿ ಜಾರಿಯಾಗುತ್ತಿವೆ. ಉತ್ಪಾದನಾ ವಲಯದಲ್ಲಿ ಇದೇ ಮೊದಲ ಬಾರಿಗೆ ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಕುಸಿದಿದೆ.ಮೋದಿ ಸರಕಾರ ಎಷ್ಟೇ ಜಂಭ ಕೊಚ್ಚಿಕೊಂಡರೂ ಬಂಡವಾಳ ಹೂಡಿಕೆ ಆಗುತ್ತಿಲ್ಲ.ಉದ್ಯೋಗಸ್ಥರ ಬದಲಾಗಿ ಗುತ್ತಿಗೆ ಹೊರಗುತ್ತಿಗೆ ತಾತ್ಕಾಲಿಕ ಉದ್ಯೋಗಗಳು ಹೆಚ್ಚಾಗಿದೆ. ಬಂಡವಾಳಶಾಹಿಗಳ ಪರವಾಗಿ ಕಾರ್ಮಿಕ ಕಾನೂನುಗಳನ್ನು ಬದಲಿಸಿ ಸಂಹಿತೆಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ಹೇಳಿದರು.
ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೇರಿಂಜರವರು ಮಾತನಾಡಿ, ಕಳೆದ 10 ವರ್ಷಗಳ ಮೋದಿ ಸರಕಾರದ ನೀತಿಗಳು ಕಾರ್ಮಿಕ ವರ್ಗದ ಬದುಕಿನ ಮೇಲೆ ಪ್ರಹಾರಗಳನ್ನು ನಡೆಸಿದೆ.ಆದಾಯ ಕುಸಿತ, ಖಾಯಂ ಉದ್ಯೋಗಗಳ ಕುಸಿತ, ಗುತ್ತಿಗೆ ಹೊರಗುತ್ತಿಗೆ ಹಾಗೂ ಬಿಟ್ಟಿ ದುಡಿಮೆ ಹೆಚ್ಚಳ,ಕೋವಿಡ್ ಪರಿಸ್ಥಿತಿಯಲ್ಲಿ ವಲಸೆ ಕಾರ್ಮಿಕರು ಅನುಭವಿಸಿದ ಸಂಕಟ ಹಾಗೂ ಕ್ರಷಿ ಬಿಕ್ಕಟ್ಟಿನ ಪರಿಣಾಮದಿಂದ ಅಸಂಘಟಿತ ಕಾರ್ಮಿಕರ ಸಂಖ್ಯೆಯಲ್ಲಿ ತೀವ್ರ ಹೆಚ್ಚಳ, ಸಾಮಾಜಿಕ ರಕ್ಷಣೆ ಇಲ್ಲದ ಅತಂತ್ರದ ಬದುಕು, ಯೋಜನಾ ಕಾರ್ಮಿಕರನ್ನು ಗೌರವಧನದ ಹೆಸರಲ್ಲಿ ಶೋಷಿಸುವ ನೀತಿ ತೀವ್ರಗೊಂಡಿದೆ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಅವರು ಮಾತನಾಡುತ್ತಾ, ಜನಸಾಮಾನ್ಯರ ಸಂಕಷ್ಟಗಳಿಗೆ ಪರಿಹಾರ ಒದಗಿಸಬೇಕಾದ ಕೇಂದ್ರ ಸರಕಾರ ಪ್ರತಿಯೊಂದು ಹಂತದಲ್ಲಿಯೂ ಕಾರ್ಪೊರೇಟ್ ಕಂಪೆನಿಗಳಿಗೆ ಲಾಭವಾಗುವ ನೀತಿಗಳನ್ನು ಜಾರಿಗೊಳಿಸುತ್ತಿದೆ. ಇದರಿಂದಾಗಿ ದೇಶದ 45%ದಷ್ಟು ಸಂಪತ್ತು ಹೊಂದಿರುವ ಕೇವಲ 1% ದಷ್ಟಿರುವ ಶ್ರೀಮಂತರಲ್ಲಿ ಕೇವಲ 3% ದಷ್ಟು ಮಾತ್ರವೇ ಜಿಎಸ್ ಟಿ ಸಂಗ್ರಹ ಮಾಡಲಾಗುತ್ತಿದೆ.ಆದರೆ ದೇಶದ 50%ರಷ್ಟು ಜನರಿಂದ 65% ರಷ್ಟು ಜಿಎಸ್ ಟಿ ಸಂಗ್ರಹ ಮಾಡಲಾಗುತ್ತಿದೆ ಎಂದು ಹೇಳಿದರು.
ಸಭೆಯನ್ನುದ್ದೇಶಿಸಿ ರಾಜ್ಯ ರೈತ ಸಂಘದ ನಾಯಕರಾದ ಸನ್ನಿ ಡಿಸೋಜ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರಾದ ಯಾದವ ಶೆಟ್ಟಿಯವರು ಮಾತನಾಡಿ, ಕೇಂದ್ರ ಸರಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ನಾಯಕರಾದ ವಸಂತ ಆಚಾರಿ, ಯೋಗೀಶ್ ಜಪ್ಪಿನಮೊಗರು, ಸುಕುಮಾರ್,ಪದ್ಮಾವತಿ ಶೆಟ್ಟಿ, ಜಯಂತ ನಾಯಕ್, ಜಯಂತಿ ಶೆಟ್ಟಿ, ವಸಂತಿ ಕುಪ್ಪೆಪದವು, ರಾಧಾ ಮೂಡಬಿದ್ರೆ, ಗಿರಿಜಾ, ನೋಣಯ್ಯ ಗೌಡ, ರೋಹಿದಾಸ್, ಸುಂದರ ಕುಂಪಲ,ಬಿ.ಕೆ‌.ಇಮ್ತಿಯಾಜ್ ಎಐಟಿಯುಸಿ ಜಿಲ್ಲಾ ಮುಖಂಡರಾದ ಬಿ.ಶೇಖರ್, ವಿ.ಕುಕ್ಯಾನ್, ಎಚ್.ವಿ.ರಾವ್, ಕರುಣಾಕರ್,ಸುರೇಶ್ ಕುಮಾರ್,ಸುಲೋಚನ, ರೈತ ಸಂಘಟನೆ ಗಳ ಮುಖಂಡರಾದ ಕ್ರಷ್ಣಪ್ಪ ಸಾಲ್ಯಾನ್, ಸದಾಶಿವದಾಸ್,ಓಸ್ವಾಲ್ಡ್ ಪ್ರಕಾಶ್ ಮುಂತಾದವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು