7:23 AM Sunday14 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ ಪಿಎಂಇಜಿಪಿ, ಮುದ್ರಾ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ: ಲೀಡ್ ಬ್ಯಾಂಕ್ ಸಭೆಯಲ್ಲಿ ಸಂಸದ ಕ್ಯಾ. ಚೌಟ ಸೂಚನೆ

10/09/2024, 22:16

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರಕಾರದ ಪಿಎಂಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗದ ಹೆಚ್ಚಿನ ಫಲಾನುಭವಿಗಳನ್ನು ತಲುಪಲು ಬ್ಯಾಂಕ್ ಗಳು ಉತ್ತೇಜನ ನೀಡಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದರು.
ನಗರದ ಉರ್ವ ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ದ.ಕ ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ದೊರೆಯುವ ಸಾಲ-ಸೌಲಭ್ಯಗಳ ಬಗ್ಗೆ ಅರ್ಹ ಫಲಾನುಭವಿಗಳಿಗೆ ಸೂಕ್ತ ಮಾಹಿತಿ ನೀಡಿ ಅದರ ಅನುಕೂಲ ದೊರಕಿಸಿ ಕೊಡುವುದಕ್ಕೆ ಜಿಲ್ಲೆಯಲ್ಲಿರುವ ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು.
ಪಿಎಂಇಜಿಪಿ ಯೋಜನೆಗೆ ಫಲಾನುಭವಿಗಳ ಆಯ್ಕೆ ಹಾಗೂ ಆಯ್ಕೆಗೊಂಡ ಫಲಾನುಭವಿಗಳ ಸಹಾಯಧನ ವಿಚಾರವಾಗಿಯೂ ಜಿಲ್ಲಾ ಕೈಗಾರಿಕಾ ಕೇಂದ್ರದ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಂಸದರು ವಿಸ್ತೃತವಾಗಿ ಚರ್ಚಿಸಿದರು.
ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರೈತರಿಗೆ ಕೆಸಿಸಿ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ಒದಗಿಸುವುದಕ್ಕೆ ಬ್ಯಾಂಕ್ಗಳು ಆದ್ಯತೆ ನೀಡಬೇಕು. ಜತೆಗೆ ಉನ್ನತ ವಿದ್ಯಾಭ್ಯಾಸಕ್ಕೆ ಸಾಲ ನೀಡುವಲ್ಲಿ ಕೂಡ ಬ್ಯಾಂಕ್ಗಳು ಯಾವುದೇ ವಿಳಂಬ ಮಾಡದೆ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಸಾಲ ಮಂಜೂರು ಮಾಡಬೇಕೆಂದು ಬ್ಯಾಂಕ್ ಅಧಿಕಾರಿಗಳಿಗೆ ಕ್ಯಾ. ಚೌಟ ಅವರು ಸೂಚಿಸಿದರು.
ಪಿಎಂ-ಸ್ವನಿಧಿ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಾಲ-ಸೌಲಭ್ಯ ಒದಗಿಸಲಾಗುತ್ತಿದೆ. ಈ ಯೋಜನೆ ಬಗ್ಗೆ ಬೀದಿಬದಿ ವ್ಯಾಪಾರಿಗಳಿಗೆ ಹೆಚ್ಚಿನ ಅರಿವು ಮೂಡಿಸುವ ಜತೆಗೆ ಅವರಿಗೆ ಸಾಲ ಸೌಲಭ್ಯವನ್ನು ಒದಗಿಸುವುದಕ್ಕೆ ಅಗತ್ಯ ಕ್ರಮ ವಹಿಸಬೇಕೆಂದು ಅವರು ತಿಳಿಸಿದರು.
ಸಂಸದರಾಗಿ ಆಯ್ಕೆಗೊಂಡ ಬಳಿಕ ಪಾಲ್ಗೊಂಡಿದ್ದ ಇಂದಿನ ಈ ಮೊದಲ ಲೀಡ್ ಬ್ಯಾಂಕ್ ಸಭೆಯಲ್ಲಿ ಕ್ಯಾ. ಚೌಟ ಅವರು ಜಿಲ್ಲೆಯ ಬ್ಯಾಂಕಿಂಗ್ ವಲಯದಲ್ಲಿರುವ ವಿವಿಧ ಯೋಜನೆಗಳು, ಗ್ರಾಹಕರ ಸಮಸ್ಯೆಗಳು ಸಮಸ್ಯೆಗಳು ಹಾಗೂ ಸಾಲ- ಸೌಲಭ್ಯಗಳ ವಿತರಣೆಯಲ್ಲಿ ಬ್ಯಾಂಕ್ ಗಳ ಪ್ರಗತಿ ಬಗ್ಗೆಯೂ ಬ್ಯಾಂಕ್ ಅಧಿಕಾರಿಗಳ ಜತೆಗೆ ಸಮಗ್ರವಾಗಿ ಪರಾಮರ್ಶೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು