1:30 AM Monday23 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಕೇರಳದಲ್ಲಿ ಕೋವಿಡ್ ಹೆಚ್ಚಳ: ತಲಪಾಡಿ ಗಡಿಯಲ್ಲಿ ಕಟ್ಟೆಚ್ಚರ; ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಪರಿಶೀಲನೆ

30/07/2021, 20:28

ಮಂಗಳೂರು(reporterkarnataka.com): ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಮತ್ತೆ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿಭಾಗವಾದ ತಲಪಾಡಿ ಚೆಕ್ ಪೋಸ್ಟ್ ಸೇರಿದಂತೆ ಕೇರಳದೊಂದಿಗೆ ಹಂಚಿಕೊಂಡಿರುವ ಎಲ್ಲ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸಂದರ್ಭದಲ್ಲಿ ಗಡಿಯಲ್ಲಿ ಕೈಗೊಳ್ಳಲಾಗಿರುವ ಕೋವಿಡ್ ತಪಾಸಣಾ ಕಾರ್ಯಗಳ ಪ್ರಕ್ರಿಯೆಗಳನ್ನು ಕುಲಂಕುಶವಾಗಿ ಪರಿಶೀಲಿಸಿದರು. ಪೊಲೀಸ್ ಆಯುಕ್ತ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್,  ತಹಶೀಲ್ದಾರ್ ಗುರುಪ್ರಸಾದ್, ಟಿಎಚ್ಒ ಡಾ. ಸುಜಯ್ ಭಂಡಾರಿ, ವೈದ್ಯಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು