10:16 PM Thursday18 - December 2025
ಬ್ರೇಕಿಂಗ್ ನ್ಯೂಸ್
ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ…

ಇತ್ತೀಚಿನ ಸುದ್ದಿ

ಕೇರಳದಲ್ಲಿ ಮತ್ತೆ ನೋರೋ ವೈರಸ್ ಭೀತಿ:‌ ಇಬ್ಬರು ಶಾಲಾ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆ

07/06/2022, 09:33

ಕೊಚ್ಚಿ(reporterkarnataka.com): ಕೇರಳ ರಾಜ್ಯದಲ್ಲಿ ಎರಡು ನೋರೋ ವೈರಸ್ ಪ್ರಕರಣಗಳ ದೃಢಪಟ್ಟಿವೆ.

ರಾಜಧಾನಿ ತಿರುವನಂತಪುರಂನ ವಿಝಿಂಜಂನ ಇಬ್ಬರು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ಸಾಂಕ್ರಾಮಿಕದ ಸೋಂಕು ಪತ್ತೆಯಾಗಿದೆ.

ಈ ಶಾಲೆಯಲ್ಲಿ ವಿಷಪೂರಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಈ ವಿದ್ಯಾರ್ಥಿಗಳಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿತ್ತು. ಈ ಸಂಬಂಧ ಆಸ್ಪತ್ರೆಗೆ ದಾಖಲಾದ 42 ವಿದ್ಯಾರ್ಥಿಗಳ ರಕ್ತದ ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ 42 ಮಾದರಿಗಳಲ್ಲಿ, ಎರಡು ನೋರೋವೈರಸ್‌ ಪ್ರಕರಣಗಳು ಪತ್ತೆಯಾಗಿವೆ.

ಜನರು ನೋರೋವೈರಸ್‌ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ರಾಜ್ಯದ ಆರೋಗ್ಯ ಇಲಾಖೆಯು ಪರಿಸ್ಥಿತಿಯನ್ನು ಸೂಕ್ತವಾಗಿ ನಿಭಾಯಿಸುತ್ತಿದೆ. ಸೋಂಕನ್ನು ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಇಬ್ಬರು ಮಕ್ಕಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸುದ್ದಿಸಂಸ್ಥೆಗಳಿಗೆ ತಿಳಿಸಿದ್ದಾರೆ.

ನೋರೋವೈರಸ್ ನೀರು ಮತ್ತು ಆಹಾರದ ಕಣಗಳ ಮೂಲಕ ಹರಡುತ್ತದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ನೊರೊವೈರಸ್ ಸೋಂಕು ಸಾಮಾನ್ಯವಾಗಿ ಎರಡು ದಿನಗಳವರೆಗೆ ಇರುತ್ತದೆ ಮತ್ತು ಇದು ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮಗಳನ್ನು ಬೀರುವುದಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ನೊರೊವೈರಸ್ ಚಿಕ್ಕವರು ಮತ್ತು ವಯಸ್ಸಾದವರಲ್ಲಿ ನಿರ್ಜಲೀಕರಣವನ್ನು ಉಂಟುಮಾಡಬಹುದು. ಕೆಲವು ರೋಗಿಗಳಲ್ಲಿ, ಸೋಂಕು ತಗುಲಿದ ನಂತರ ದೇಹವು ಒಂದು ವಾರದವರೆಗೆ ದುರ್ಬಲಗೊಂಡಿರುತ್ತದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

2021ರ ನವೆಂಬರ್‌ ನಲ್ಲಿ ಕೇರಳಾದಲ್ಲಿ ಮೊದಲಬಾರಿ ನೋರೋ ವೈರಸ್‌ ಪ್ರಕರಣಗಳು ವರದಿಯಾಗಿದ್ದವು. ವಯನಾಡಿನ ಪಶು ವೈದ್ಯಕೀಯ ವಿವಿಯ 13 ವಿದ್ಯಾರ್ಥಿಗಳಿಗೆ ಸೋಂಕು ತಗುಲಿತ್ತು. ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರಿಂದ ಮತ್ತೆ ಪ್ರಕರಣಗಳು ಕಾಣಸಿಕೊಂಡಿರಲಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು