2:34 PM Thursday11 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ…

ಇತ್ತೀಚಿನ ಸುದ್ದಿ

ಕೇರಳ ರಾಜ್ಯ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನ ಪ್ರಚಾರ ಪತ್ರ ಬಿಡುಗಡೆ: ವಿವಿಧ ಸಂಘಟನೆಗಳ ಪ್ರತಿನಿಧಿಗಳ ಸಭೆ

27/09/2024, 23:44

ಕಾಸರಗೋಡು(reporterkarnataka.com): ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಇದರ ಸಹಯೋಗದಲ್ಲಿ ನವೆಂಬರ್ 10ರಂದು ನಡೆಯಲಿರುವ ಕೇರಳ ರಾಜ್ಯ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವಿವಿಧ ಸಂಘಟನೆಗಳ ಪ್ರತಿನಿಧಿಗಳ ಸಭೆ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಹಾಗೂ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಸಭೆಯ ಅಧ್ಯಕ್ಷತೆ ವಹಿಸಿದರು. ಕಾಸರಗೋಡು ನಗರ ಸಭೆಯ ಸದಸ್ಯೆ ಶಾರದಾ ಉದ್ಘಾಟಿಸಿದರು. ಕರ್ನಾಟಕ ಕಲಾ ಮತ್ತು ಸಾಂಸ್ಕೃತಿಕ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಯು.ಆರ್ ಶೆಟ್ಟಿ , ನಿರಂಜನ ಕೊರಕ್ಕೋಡು, ಕೆ. ಗುರುಪ್ರಸಾದ್ ಕೋಟೆಕಣಿ, ಲವ ಮೀಪುಗುರಿ, ದಿವಾಕರ ಅಶೋಕ್ ನಗರ, ಕುಶಲಕುಮಾರ್ ಪಾರಕಟ್ಟೆ ಮೊದಲಾದವರು ಸಲಹೆ ಸೂಚನೆಯಿತ್ತರು. ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು. ಅನಿಲ್ ರಾಜ್ ನಾಗರಕಟ್ಟೆ ವಂದಿಸಿದರು.
ಸಂಘಟನೆಗಳ ಸಮಾಲೋಚನಾ ಸಭೆಯಲ್ಲಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಸ್ವಾಗತ ಸಮಿತಿ ಅಧ್ಯಕ್ಷರಾಗಿ ಶಿವರಾಮ ಕಾಸರಗೋಡು, ಪ್ರಧಾನ ಸಂಚಾಲಕರಾಗಿ ಕೆ . ಜಗದೀಶ ಕೂಡ್ಲು ಹಾಗೂ ಕಾರ್ಯಕ್ರಮ ಸಂಯೋಜನ ಸಮಿತಿಯ ಅಧ್ಯಕ್ಷರಾಗಿ ಗುರುಪ್ರಸಾದ್ ಕೋಟೆ ಕಣಿ, ಗೌರವ ಸಲಹೆಗಾರರಾಗಿ ಕೆ. ನಿರಂಜನ ಕೊರಕ್ಕೋಡು, ಸಂಚಾಲಕರಾಗಿ ಯು. ಆರ್ ಶೆಟ್ಟಿ ಮಂಗಳೂರು, ಪ್ರದೀಪ್ ಬೇಕಲ್, ದಿವಾಕರ ಅಶೋಕ್ ನಗರ್, ಶ್ರೀಕಾಂತ್ ಕಾಸರಗೋಡು, ಕುಶಲಕುಮಾರ್ ಕೆ., ಅನಿಲ್ ರಾಜ್ ನಾಗರಕಟ್ಟೆ, ಅವರನ್ನು ಆಯ್ಕೆ ಮಾಡಲಾಯಿತು.
2024 ನವೆಂಬರ್ 10ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆಯಲಿರುವ ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ ಇದರ ಪ್ರಚಾರ ಪತ್ರವನ್ನು ಕಾಸರಗೋಡು ನಗರಸಭಾ ಸದಸ್ಯೆ ಶಾರದಾ ಅವರು ಮಕ್ಕಳಿಗೆ ನೀಡಿ ಬಿಡುಗಡೆಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು