ಇತ್ತೀಚಿನ ಸುದ್ದಿ
ಸುಟ್ಟು ಕರಕಲಾದ ಕೇರಳದ ಸರಕಾರಿ ಬಸ್; ಅದೃಷ್ಟವಶಾತ್ ಪ್ರಯಾಣಿಕರು ಪಾರು
19/12/2025, 22:45
ಗಿರಿಧರ್ ಕೊಂಪುಳಿರ ಮೈಸೂರು
info.reporterkarnataka@gmail.com
ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರುಕಲಾದ ಘಟನೆ ನಂಜನಗೂಡಿನ ಹೊಸಹಳ್ಳಿ ಗ್ರಾಮದ ಗೇಟ್ ಬಳಿ ನಡೆದಿದೆ.
ಬಸ್ ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ಕೇರಳಾಗೆ ತೆರಳುತ್ತಿದ್ದ KL-15, A- 2444 ನೊಂದಣಿ ಸಂಖ್ಯೆ ಬಸ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.



ಎಚ್ಚೆತ್ತ ಚಾಲಕ ಹೊಸಹಳ್ಳಿ ಗೇಟ್ ಬಳಿ ನಿಲ್ಲಿಸಿ ಪ್ರಯಾಣಿಕರನ್ನ ಬಸ್ಸಿನಿಂದ ಕೆಳಗಿಳಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಬಾರಿ ಪ್ರಮಾಣದ ಬೆಂಕಿ ವ್ಯಾಪಿಸಿ ಬಸ್ ಸುಟ್ಟು ಕರುಕಲಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳ ಆಗಮನಕ್ಕೆ ಮುನ್ನವೇ ಬಸ್ ಸುಟ್ಟು ಕರುಕಲಾಗಿದೆ.
ಕೇರಳ ರಾಜ್ಯಕ್ಕೆ ಸೇರಿದ ಸಾರಿಗೆ ಬಸ್ ಇದಾಗಿದ್ದು. ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕರಿಗೆ ಪರ್ಯಾಯ ಬಸ್ ವ್ಯವಸ್ಥೆ ಮಾಡಿದ್ದಾರೆ. ನಂಜನಗೂಡು ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.












