12:29 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ

09/01/2026, 15:56

ಬೆಂಗಳೂರು(reporterkarnataka.com): ಕೇರಳ‌ ಸರ್ಕಾರ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ- 2025ರ ನಡೆಯ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಕೇರಳದ‌ ಗಡಿ ಜಿಲ್ಲೆಯಲ್ಲಿ‌ ವಾಸ ಮಾಡುತ್ತಿರುವ ಜನರ ಮನಸ್ಸು ಸಂಪೂರ್ಣ ಕನ್ನಡ‌‌ ಭಾಷೆಯೊಂದಿಗೆ ಬೆರೆತು ಹೋಗಿದೆ. ಕೇರಳದಲ್ಲಿ ಸುಮಾರು 202 ಕನ್ನಡ ಮಾಧ್ಯಮ ಶಾಲೆಗಳಿವೆ. ನಾನೇ ಖುದ್ದಾಗಿ ಕಳೆದ ಒಂದೂವರೆ ವರ್ಷದ ಹಿಂದೆ ಎಡನೀರು ಮಠಕ್ಕೆ ಭೇಟಿ ನೀಡಿ, ಮಠ ನಿರ್ವಹಣೆ ಮಾಡುತ್ತಿರುವ ಕನ್ನಡ ಶಾಲಾ ಕಾರ್ಯಕ್ರಮದಲ್ಲಿ‌ ಭಾಗವಹಿಸಿದ್ದೆ.
ಕಾಸರಗೋಡಿನ‌ ಜನರ ಮನಸ್ಸು ಹಾಗೂ ಜೀವನ ಸಂಪೂರ್ಣ ಕನ್ನಡ ಭಾಷಾಮಯವಾಗಿದೆ. ಅಲ್ಲಿನ ಕನ್ನಡ ಭಾಷಾ ಬಳಕೆ‌ ನೋಡಿದ ನನಗೆ ಕೇರಳಕ್ಕೆ ಭೇಟಿ ನೀಡಿದ್ದೆ ಎಂದು ಅನಿಸಲಿಲ್ಲ. ಹೀಗಿದ್ದು, ಕೇರಳ ಸರ್ಕಾರ ಇಂತಹ ಮಸೂದೆ ಜಾರಿಗೆ ತಂದಿರುವುದು ಸರಿಯಲ್ಲ.
ಕೇರಳ ವಿಧಾನಸಭೆ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ – 2025ನ್ನು ಕೂಡಲೇ ಹಿಂಪಡೆಯಬೇಕು. ಯಾವುದೇ ಸಂದರ್ಭದಲ್ಲಿ ನಮ್ಮ ಸರ್ಕಾರ ಕನ್ನಡದ ಮನಸ್ಸು ಹಾಗೂ ಭಾವನೆಗಳಿಗೆ ಧಕ್ಕೆಯಾಗಲು ಬಿಡುವುದಿಲ್ಲ ಎಂದಿದ್ದಾರೆ.
ಈಗಾಗಲೇ ಕೇರಳ‌ ಸರ್ಕಾರ ಮಸೂದೆಯನ್ನು ಅಂಗೀಕರಿಸುವ ಮೂಲಕ ಮಕ್ಕಳ‌ ಹಕ್ಕಿನ ಉಲ್ಲಂಘನೆ ಮಾಡಿದ್ದು, ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ ಕೂಡ ಮಾಡಿದೆ.
ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ನಿಯೋಗ ಕೇರಳ‌ ರಾಜ್ಯಪಾಲರನ್ನು ಭೇಟಿಯಾಗಿ ಮಸೂದೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದೆ. ಅಂಗೀಕಾರಗೊಂಡಿರುವ ಮಸೂದೆಯ ಮುಂದಿನ‌ ಹಂತಕ್ಕೆ ಹೋಗದಂತೆ ತಡೆಯಬೇಕು ಎಂದು ಆಗ್ರಹಿಸಿದೆ.‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ‌ ಚರ್ಚೆ ನಡೆಸಿ, ನಿಯೋಗವೊಂದನ್ನು ಅಲ್ಲಿನ‌ ರಾಜ್ಯಪಾಲರ ಬಳಿ‌ ಕೊಂಡಯ್ಯಲಾಗುವುದು ಎಂದು ತಿಳಿಸಿದ್ದಾರೆ.
ಕೂಡಲೇ‌ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ, ಸಂವಿಧಾನದ‌ 205ಬಿಯಲ್ಲಿ ಕಲ್ಪಿಸಿರುವ ಅವಕಾಶದಂತೆ ಭಾಷಾ ನಿರ್ದೇಶಕರನ್ನು ಕೇರಳ ರಾಜ್ಯಕ್ಕೆ ಕಳುಹಿಸಿ ಕೊಡಬೇಕು ಎಂದು ಒತ್ತಾಯಿಸಿರುವ ಅವರು, ಈ‌ ಕುರಿತಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಾಗುವುದು ಎಂದು ಹೇಳಿದ್ದಾರೆ.
ಇನ್ನು ರಾಜ್ಯದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ರಾಜೀವ್ ಚಂದ್ರಶೇಖರ್ ಅವರು ಕೂಡ ಕೇರಳದ ಈ‌ ನಡೆ ಬಗ್ಗೆ ಧ್ವನಿ ಎತ್ತಬೇಕು ಎಂದು ಶಿವರಾಜ್ ತಂಗಡಗಿ ಅವರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು