1:38 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Kerala | ಮಾವುತನ ತುಳಿದು ಕೊಂದ ಹರಿಪಾದ್‌ ಸುಬ್ರಹ್ಮಣ್ಯ ದೇವಸ್ಥಾನದ ಆನೆ: ಇನ್ನೊರ್ವ ಗಂಭೀರ

02/09/2025, 15:41

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳದ ಕರಾವಳಿ ಜಿಲ್ಲೆಯ ಹರಿಪಾದ್‌ನ ಸುಬ್ರಹ್ಮಣ್ಯ ದೇವಸ್ಥಾನದ ಆನೆಯು ರವಿವಾರ ಮಾವುತನೋರ್ವನನ್ನು ತುಳಿದು ಕೊಂದಿದ್ದು,ಇನ್ನೋರ್ವ ಮಾವುತ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೋಲಿಸರು ತಿಳಿಸಿದ್ದಾರೆ.
ಮೃತ ಮಾವುತ ಮುರಳೀಧರನ್ ದೇವಸ್ಥಾನದ ಸ್ಕಂದನ್ ಹೆಸರಿನ ಆನೆಯನ್ನು ನೋಡಿಕೊಳ್ಳುತ್ತಿದ್ದರು.
ಕಳೆದ ಕೆಲವು ತಿಂಗಳುಗಳಿಂದ ಮದವೇರಿದ್ದ ಆನೆಯನ್ನು ದೇವಸ್ಥಾನದ ಅರ್ಚಕರ ಮನೆಯಲ್ಲಿ ಕಟ್ಟಿ ಹಾಕಲಾಗಿತ್ತು. ರವಿವಾರ ಮಧ್ಯಾಹ್ನ ವ್ಯಗ್ರಗೊಂಡಿದ್ದ ಆನೆಯು ಇನ್ನೋರ್ವ ಮಾವುತ ಸುನೀಲ್ ಕುಮಾರ್ ಮೇಲೆ ದಾಳಿ ನಡೆಸಿದ್ದು, ಸ್ಥಳಕ್ಕೆ ಧಾವಿಸಿದ ಮುರಳೀಧರನ್ ಅದನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು. ಆದರೆ ನಂತರ ಆನೆಯನ್ನು ದೇವಸ್ಥಾನಕ್ಕೆ ಸ್ಥಳಾಂತರಿಸುವಾಗ ಮತ್ತೆ ವ್ಯಗ್ರಗೊಂಡಿದ್ದ ಅದು ಮುರಳೀಧರನ್ ಮೇಲೆ ದಾಳಿ ನಡೆಸಿತ್ತು.
ಇತರ ಮಾವುತರು ಗಂಭೀರವಾಗಿ ಗಾಯಗೊಂಡಿದ್ದ ಮುರಳೀಧರರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರಾದರೂ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಸುನೀಲ್ ಕುಮಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು