3:33 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಮಂಗಳೂರಿಗಾಗಿ ಕೇರಳ ಸಂಸದರಿಂದ ಓಣಂ ಉಪವಾಸ: ಮೈಸೂರು ವಿಭಾಗಕ್ಕೆ ಸೇರ್ಪಡೆಗೆ ಆಕ್ರೋಶ

24/08/2026, 15:33

ತಿರುವನಂತಪುರ(reporterkarnataka.com): ಪಾಲಕ್ಕಾಡ್ ರೈಲ್ವೆ ವಿಭಾಗವನ್ನು ವಿಭಜಿಸಿ, ಮಂಗಳೂರು ಸೇರಿದಂತೆ ಕೆಲ ರೈಲು ನಿಲ್ದಾಣಗಳನ್ನು ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಕೇರಳದ ಸಂಸದರು ಓಣಂ ಹಬ್ಬದ ದಿನದಂದು (ಆ.26ರಂದು) ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ.
ಮಂಗಳೂರು ನಿಲ್ದಾಣವನ್ನು ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿರುವ ರೈಲ್ವೆ ಮಂಡಳಿಯ ನಿರ್ಧಾರವನ್ನು ಬಿಜೆಪಿ ಹಿರಿಯ ನಾಯಕ ಪಿ.ಕೆ. ಕೃಷ್ಣದಾಸ್ ಸಮರ್ಥಿಸಿಕೊಂಡಿದ್ದಾರೆ. ‘ಮೈಸೂರು ವಿಭಾಗವೇನು ಅಮೆರಿಕದಲ್ಲಿದೆಯೇ? ಅದೂ ಕೂಡ ಭಾರತೀಯ ರೈಲ್ವೆಯ ಭಾಗವೇ ಅಲ್ಲವೇ?’ಎಂದು ಪ್ರಶ್ನಿಸಿದ್ದಾರೆ.
ಕಾಸರಗೋಡು ಸಂಸದ ರಾಜ್‌ಮೋಹನ್ ಉಣ್ಣಿಥಾನ್ ಮತ್ತು ಪಾಲಕ್ಕಾಡ್ ಸಂಸದ ವಿ.ಕೆ. ಶ್ರೀಕಂಠನ್ ಈ ಕುರಿತು ಪ್ರತ್ಯೇಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

*ಕೇರಳಂ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಅನ್ಯಾಯ*
‘ಓಣಂ ಹಬ್ಬವು ಕೇರಳದ ಜನರಿಗೆ ವಿಶೇಷ. ಅಂದು ತಮ್ಮ ಆಸ್ತಿ ಮಾರಿಯಾದರೂ ಓಣಂ ಹಬ್ಬ ಆಚರಿಸಿ ಭೋಜನ ಸವಿಯಬೇಕು ಎಂಬುದು ಸಂಪ್ರದಾಯ. ಆದರೆ ಆ ದಿನದಂದು ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಪಾಲಕ್ಕಾಡ್ ರೈಲ್ವೆ ವಿಭಾಗೀಯ ವಾಣಿಜ್ಯ ಸೂಪರಿಂಟೆಂಡೆಂಟ್ ಕಚೇರಿಯ ಮುಂಭಾಗದಲ್ಲಿ ನಾವು ಉಪವಾಸ ಸತ್ಯಾಗ್ರಹ ನಡೆಸಲಿದ್ದೇವೆ. ಮಲಬಾರ್ (ಉತ್ತರ ಕೇರಳ), ಕಾಸರಗೋಡು ಹಾಗೂ ಇಡೀ ಕೇರಳ ರಾಜ್ಯಕ್ಕೆ ಕೇಂದ್ರ ಮಾಡುತ್ತಿರುವ ಅನ್ಯಾಯದ ವಿರುದ್ಧ ಇದು ಮೊದಲ ಹಂತದ ಪ್ರತಿಭಟನೆಯಾಗಿದೆ’ ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು