2:16 PM Monday21 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

04/08/2026, 21:22

ತಿರುವನಂತಪುರಂ(reporterkarnataka.com):ಮಂಗಳವಾರ ಕೇರಳದ ಕೆಲವು ಭಾಗಗಳಲ್ಲಿ ಭಾರಿ ಮಳೆ ಮುಂದುವರಿದಿದೆ. ಅದರಲ್ಲೂ ಉತ್ತರದ ಜಿಲ್ಲೆಗಳಲ್ಲಿ ಅತಿ ಹೆಚ್ಚು ವರ್ಷಧಾರೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಆಲಪ್ಪುಳ, ಪಟ್ಟಣಂತಿಟ್ಟ, ಕೊಟ್ಟಾಯಂ ಮತ್ತು ಕೋಝಿಕ್ಕೋಡ್‌ನ ಅನೇಕ ತಗ್ಗು ಪ್ರದೇಶಗಳು ಮತ್ತು ನದಿ ತೀರದ ಪ್ರದೇಶಗಳಲ್ಲಿ ಪ್ರವಾಹ ಮುಂದುತಿರುವರಿದಿದ್ದು, ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಜನರು ಪರಿಹಾರ ಶಿಬಿರಗಳಿಗೆ ಸ್ಥಳಾಂತರಗೊಂಡಿದ್ದಾರೆ. ಅಮೂಲ್ಯವಾದ ದಾಖಲೆಗಳು ಮತ್ತು ಮಕ್ಕಳ ಶಾಲಾ ಪುಸ್ತಕಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿವೆ. ಮಂಗಳವಾರ ಮಳೆ ಸಂಬಂಧಿತ ದುರಂತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಮಳೆಗಾಲ ಮುಂದುವರಿದಂತೆ, ರಾಜ್ಯ ಸರ್ಕಾರವು ಸಂತ್ರಸ್ತ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದೆ. ಪ್ರವಾಹದಲ್ಲಿ ಕಳೆದುಹೋದ ದಾಖಲೆಗಳನ್ನು ಮರಳಿ ಪಡೆಯಲು ವಿಶೇಷ ಅದಾಲತ್‌ಗಳನ್ನು ನಡೆಸಲಾಗುವುದು ಮತ್ತು ಮಕ್ಕಳಿಗೆ ಅಗತ್ಯವಿರುವ ಪಠ್ಯಪುಸ್ತಕಗಳು ಮತ್ತು ಇತರ ಅಧ್ಯಯನ ಸಾಮಗ್ರಿಗಳನ್ನು ಸರ್ಕಾರ ಒದಗಿಸಲಿದೆ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಪಿ.ಸಿ. ವಿಷ್ಣುನಾಥ್ ತಿಳಿಸಿದರು.


ಕೇರಳಂನಲ್ಲಿ ಮುಂದುವರಿದ ಭಾರಿ ಮಳೆ: ಪ್ರತಿ ವಾರ್ಡ್‌ನ ಸ್ವಚ್ಛತೆಗಾಗಿ ಸರ್ಕಾರ 25,000 ರುಪಾಯಿ ಮಂಜೂರು ಮಾಡಿದೆ ಎಂದು ಅವರು ಹೇಳಿದರು. ಹಲವು ಸ್ವಯಂಸೇವಕ ಸಂಸ್ಥೆಗಳು ಪ್ರವಾಹದ ನೀರು ಪ್ರವೇಶಿಸಿದ ಮನೆಗಳನ್ನು ಸ್ವಚ್ಛಗೊಳಿಸಲು ಸಹಾಯ ಮಾಡಲು ಮುಂದೆ ಬಂದಿವೆ.
ಮನೆ ಮತ್ತು ಜೀವನೋಪಾಯವನ್ನು ಕಳೆದುಕೊಂಡ ಜನರಿಗೆ ವಿಳಂಬವಿಲ್ಲದೆ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್‌ ಘೋಷಿಸಿದ್ದಾರೆ ಎಂದು ಸಚಿವರು ಹೇಳಿದರು. ಆಗಸ್ಟ್ 4ರಂದು ರಾಜ್ಯದ 12 ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಮತ್ತು ಎರಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಿತ್ತು.
ಆಗಸ್ಟ್ 3ರಂದು ಬೆಳಗಿನ ಜಾವ 3 ಗಂಟೆಯಿಂದ ಮಧ್ಯರಾತ್ರಿಯವರೆಗೆ ಕಾಸರಗೋಡಿನ ಬಾಯಾರ್‌ನಲ್ಲಿ 121.5 ಮಿ.ಮೀ. ಮಳೆಯಾಗಿದ್ದು, ಇದು ರಾಜ್ಯದಲ್ಲಿ ಅತ್ಯಧಿಕ ಎಂದು ಐಎಂಡಿ ತಿಳಿಸಿದೆ. ಕಾಸರಗೋಡಿನ ಮುಳಿಯಾರ್‌ನಲ್ಲಿ 81 ಮಿ.ಮೀ. ಮಳೆಯಾಗಿದ್ದರೆ, ಕಣ್ಣೂರು ವಿಮಾನ ನಿಲ್ದಾಣದಲ್ಲಿ 74 ಮಿ.ಮೀ. ಮಳೆ ಸುರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು