12:42 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: 5 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ದಾರುಣ ಸಾವು

03/12/2024, 18:35

ತಿರುವನಂತಪುರಂ(reporterkarnataka.com): ಕೇರಳದ ಅಲಪುಝಾ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಮೃತಪಟ್ಟವರನ್ನು ಸಂದೀಪ್ ವಲ್ಸನ್, ಆಯೂಷ್ ಶಾಜಿ, ಮಹಮ್ಮದ್ ಇಬ್ರಾಹಿಂ ಪಿಪಿ, ದೇವನಂದನ್ ಹಾಗೂ ಮಹಮ್ಮದ್ ಅಬ್ದುಲ್ ಜಬ್ಬ‌ರ್ ಎಂದು ಗುರುತಿಸಲಾಗಿದೆ.
ಬಸ್‌ ಮತ್ತು ಕಾರು ನಡುವೆ ಕರ್ಲಕೋಡ್ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಸೋಮವಾರ ತಡರಾತ್ರಿ 10 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಕಾರಿನಲ್ಲಿದ್ದ
ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.ಹಾಗೆ ಬಸ್ಸಿನಲ್ಲಿದ್ದ ಹಲವರು ಸಣ್ಣಪುಟ್ಟ ಗಾಯಗಳಾಗಿವೆ.
ಮೃತಪಟ್ಟ ವಿದ್ಯಾರ್ಥಿಗಳು ಪ್ರಥಮ ವರ್ಷದ ವೈದ್ಯಕೀಯ
ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.ಭೀಕರ ಅಪಘಾತದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು