ಇತ್ತೀಚಿನ ಸುದ್ದಿ
ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ
05/04/2026, 20:11
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ತಡಿಯಂಡಮೋಳ್ ಬೆಟ್ಟಕ್ಕೆ ಗುರುವಾರ ಬೆಳಗ್ಗೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ(36) ಪತ್ತೆಯಾಗಿದ್ದಾರೆ.
ಸ್ಥಳೀಯ ಕುಡಿಯ ಸಮುದಾಯದ ಶೋಧ ಕಾರ್ಯ ಸಂದರ್ಭದಲ್ಲಿ ಶರಣ್ಯ ಪತ್ತೆಯಾಗಿದ್ದಾರೆ. ವತಡಿಯಂಡಮೋಳ್ ಬೆಟ್ಟದಲ್ಲಿ ನಾಲ್ಕು ದಿನಗಳಿಂದ ಅವರು ನಾಪತ್ತೆಯಾಗಿದ್ದರು.
ಅರಣ್ಯ, ಪೊಲೀಸ್, ಇಲಾಖೆ, ಗ್ರಾಮಸ್ಥರು ನಕ್ಸಲ್ ನಿಗ್ರಹ ಪಡೆಯಿಂದ ನಿರಂತರ ಶೋಧ ಕಾರ್ಯ ನಡೆದಿದೆ. ಕೊನೆಗೂ 4 ದಿನಗಳ ಸತತ ಹುಡುಕಾಟದ ಬಳಿಕ ಇಂದು ಸಂಜೆ ಅವರು ಪತ್ತೆಯಾಗಿದ್ದಾರೆ.

ಶರಣ್ಯ ಪತ್ತೆಗಾಗಿ 4 ದಿನಗಳಿಂದ ಆವಿರತ ಶ್ರಮಿಸಿದ ಪೊಲೀಸ್ ,ಅರಣ್ಯ ಇಲಾಖೆ ,ಗ್ರಾಮಸ್ಥರು ಮತ್ತು ಆಧುನಿಕ ಉಪಕರಣ ನೀಡಿದ ರಾಜ್ಯ ಸರ್ಕಾರಕ್ಕೆ ಧನ್ಯವಾದ ಮತ್ತು ಅಭಿನಂದನೆ ಸಲ್ಲಿಸಿದ ಶಾಸಕ ಎ.ಎಸ್ ಪೊನ್ನಣ್ಣ ಶರಣ್ಯ ಆರೋಗ್ಯ ವಿಚಾರಿಸಿದ್ದಾರೆ.













