3:10 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೇರಳದ ವಯನಾಡು ಪ್ರದೇಶದಲ್ಲಿ ಧಾರಾಕಾರ ಮಳೆ: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮೈದುಂಬಿ ಹರಿಯುತ್ತಿರುವ ಕಪಿಲೆ; ಸ್ನಾನಘಟ್ಟ ಮುಳುಗಡೆ

16/07/2024, 17:51

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಳೆ ಇಲ್ಲದೆ ಬಿರು ಬೇಸಿಗೆ ಬಿಸಿಲಿನಿಂದಾಗಿ ನೀರಿಲ್ಲದೆ ಬಣಗುಡುತ್ತಿದ್ದ ಕಪಿಲಾ ನದಿ ಈಗ ಕೇರಳದ ವಯನಾಡು ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿಯಲ್ಲಿ ನೀರಿನ ಒಳ ಹರಿವು ಹೆಚ್ಚಾಗಿ ಮೈದುಂಬಿ ಹರಿಯುತ್ತಿದೆ.
ಕಳೆದ ನಾಲ್ಕಾರು ದಿನಗಳಿಂದ ನದಿ ಪ್ರಾಂತ್ಯದಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆ ನದಿಯಲ್ಲಿ ಒಳಹರಿವು ಹೆಚ್ಚಾಗಿ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಇದರಿಂದಾಗಿ ಕಬಿನಿ ಜಲಾಶಯದಿಂದ ನದಿಗೆ 30 ಸಾವಿರ ಕ್ಯೂಸೆಕ್ಸ್ ನೀರು ಹೊರ ಬಿಡಲಾಗಿದೆ.


ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಕಪಿಲಾನದಿ ಸ್ನಾನ ಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದ್ದು ಐತಿಹಾಸಿಕ 16 ಕಾಲುಮಂಟಪ ಸಹ ಭಾಗಶಃ ಮುಳುಗಡೆಯಾಗಿದೆ.
ಕಪಿಲಾ ನದಿ ಸ್ನಾನಘಟ್ಟ ಮುಳುಗಡೆಯಾದ ಹಿನ್ನೆಲೆ
ಭಕ್ತಾದಿಗಳು ನದಿಗೆ ಇಳಿಯದಂತೆ ದೇವಾಲಯದ ವತಿಯಿಂದ ಮುಂಜಾಗ್ರತ ಕ್ರಮ ವಹಿಸಿ ಬ್ಯಾರಿಕೇಡ್ ಹಾಕಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿತ್ತು.
ಪ್ರವಾಹದಿಂದ ನದಿ ತುಂಬಿ ಹರಿಯುತ್ತಿರುವ ಸಂದರ್ಭದಲ್ಲಿ ಕೆಲವು ಭಕ್ತರು ಈಜಾಡುವ ಸಾಹಸ ಮಾಡುತ್ತಿದ್ದು, ವಿಶೇಷವಾಗಿತ್ತು.
ಮಳೆ ಇದೇ ರೀತಿ ಮುಂದುವರಿದರೆ ನದಿಯ ಪ್ರವಾಹ ಹೆಚ್ಚಾಗಿ ನದಿ ಪ್ರಾಂತ್ಯದ ತಗ್ಗು ಪ್ರದೇಶಗಳು ಮುಳುಗಡೆಯಾಗುವ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು