11:38 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಕೇರಳದ ಟೊಮೆಟೋ ಜ್ವರ: ಕೊಡಗಿನಲ್ಲಿ ಮುನ್ನೆಚ್ಚರಿಕಾ ಕ್ರಮ; ಗಡಿಯಲ್ಲಿ ಕಟ್ಟುನಿಟ್ಟಿನ ಆರೋಗ್ಯ ತಪಾಸಣೆ

15/05/2022, 19:00

ಮಡಿಕೇರಿ(reporterkarnataka.com): ಕೇರಳದಲ್ಲಿ ಕಂಡು ಬಂದ ಟೊಮೆಟೋ ಜ್ವರದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಆತಂಕ ಪಡುವ ಅಗತ್ಯವಿಲ್ಲವೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದಿಂದ ಕೊಡಗಿಗೆ ಬರುವ ವಾಹನಗಳನ್ನು ಗಡಿ ಭಾಗದಲ್ಲಿ ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ವಿಶೇಷ ತಂಡಗಳನ್ನು ನಿಯೋಜನೆ ಮಾಡಲಾಗಿದೆ ಎಂದರು.

ಟೊಮೆಟೋ ಜ್ವರ 5 ವರ್ಷದ ಒಳಗಿನ ಮಕ್ಕಳಲ್ಲಿ ಕಂಡು ಬರುತ್ತಿದ್ದು, ಕೋವಿಡ್‍ಗೂ ಟೊಮೆಟೋ ಜ್ವರಕ್ಕೂ ಯಾವುದೇ ಸಂಬಂಧವಿಲ್ಲ. ಇದುವರೆಗೂ ಕೊಡಗಿನಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಕೊಡಗಿಗೆ ಸಾಕಷ್ಟು ಪ್ರವಾಸಿಗರು ಬರುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯ ಜನ ಎಚ್ಚರ ವಹಿಸಬೇಕು. ಈಗಾಗಲೇ ತಾಲೂಕು ವೈದ್ಯಾಧಿಕಾರಿಗಳಿಗೂ ಜವಾಬ್ದಾರಿಯನ್ನು ನೀಡಲಾಗಿದೆ. ಐದು ವರ್ಷದೊಳಗಿನ ಮಕ್ಕಳಲ್ಲಿ ಮೈ-ಕೈ ನೋವು, ಜ್ವರ, ಚರ್ಮದಲ್ಲಿ ಗುಳ್ಳೆಗಳು ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ಡಾ.ಆರ್.ವೆಂಕಟೇಶ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು