11:06 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೇರಳದಲ್ಲಿ ಬಂಧನಕ್ಕೀಡಾದ ಶಂಕಿತ ನಕ್ಸಲ್ ಶೃಂಗೇರಿ ಪೊಲೀಸರಿಗೆ ಹಸ್ತಾಂತರ: 14 ದಿನಗಳ ನ್ಯಾಯಾಂಗ ಬಂಧನ

17/02/2024, 15:04

ಸಂತೋಷ್ ಅತ್ತಿಗೆರೆಚಿಕ್ಕಮಗಳೂರು

info.reporterkarnataka@gmail.com

ಕೇರಳದಲ್ಲಿ ಬಂಧನಕ್ಕೀಡಾದ ಕಾಫಿನಾಡ ಶಂಕಿತ ನಕ್ಸಲ್ ಶ್ರೀಮತಿ ಅವರಿಗೆ ಎನ್.ಆರ್.ಪುರ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.
ಶ್ರೀಮತಿ ಮೇಲೆ 9ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಕರಪತ್ರ ಹಂಚಿಕೆ, ಬ್ಯಾನರ್ ಕಟ್ಟಿದ್ದು, ಸರ್ಕಾರಿ ಆಸ್ತಿ ನಷ್ಟ, ವಿದ್ವಂಸಕ ಕೃತ್ಯದ ಸಂಚು, ಆಯುಧಗಳನ್ನ ಇಟ್ಟುಕೊಂಡಿದ್ದು, ಟೆಂಟ್ ಹಾಕಿದ್ದು, ಗನ್‌ ತೋರಿಸಿ ಸುಲಿಗೆ,ಪೊಲೀಸರಿಗೆ ಸಪೋರ್ಟ್ ಮಾಡದಂತೆ ಬೆದರಿಸಿದ್ದು ಸೇರಿ ವಿವಿಧ ಪ್ರಕರಣಗಳು ಅವರ ಮೇಲಿವೆ.
ಕೇರಳದಲ್ಲಿ ಬಂಧನವಾಗಿದ್ದ ಶ್ರೀಮತಿ ಕಾರ್ಕಳ ಪೊಲೀಸರ ವಶಕ್ಕೆ ನೀಡಲಾಗಿತ್ತು. ಕಾರ್ಕಳ ಪೊಲೀಸರು ಶೃಂಗೇರಿ ಪೊಲೀಸರು ಹಸ್ತಾಂತರಿಸಿದ್ದರು.
ಶ್ರೀಮತಿ ಅವರನ್ನು ಎನ್.ಆರ್.ಪುರ ಕೋರ್ಟ್ ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು