2:44 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಕೇರಳದಲ್ಲಿ ಅಬ್ಬರದ ಪೂರ್ವ ಮುಂಗಾರು ವರ್ಷಧಾರೆ: ಕೊಚ್ಚಿಯ ಐಟಿ ಟೆಕ್ ಪಾರ್ಕ್ ಜಲಾವೃತ, ಗುರುವಾಯೂರು ದೇಗುಲಕ್ಕೂ ನೀರು

23/05/2024, 13:03

ತಿರುವನಂತಪುರಂ(reporterkarnataka.com):ಕೇರಳಕ್ಕೆ ಜೂನ್ 1ರಂದು ಮುಂಗಾರು ಆಗಮಿಸಲಿದ್ದು, ಪೂರ್ವ ಮುಂಗಾರು ಹಿನ್ನೆಲೆಯಲ್ಲಿ ಮುಂದಿನ 24 ಗಂಟೆ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಕೇರಳದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮಧ್ಯ ಮತ್ತು ಉತ್ತರ ಕೇರಳದಾದ್ಯಂತ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪೂರ್ವ ಮುಂಗಾರು ಅಬ್ಬರ ಕೇರಳದಲ್ಲಿ ಈಗಾಗಲೇ ಜೋರಾಗಿದ್ದು, ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಚ್ಚಿಯ ಐಟಿ ಟೆಕ್ ಪಾರ್ಕ್ ಜಲಾವೃತ ಗೊಂಡಿದೆ. ಆಫೀಸ್ ಒಳಭಾಗದಲ್ಲಿ ನೀರು ನಿಂತಿದ್ದು, ಪರಿಣಾಮ ಟೆಕ್ಕಿಗಳು ಪರದಾಡಿದ್ದಾರೆ. ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದ ಮುಂಭಾಗ ಕೂಡ ಜಲಾವೃತವಾಗಿದೆ. ಅಂಗಡಿಗಳಿಗೂ ನೀರು ನುಗ್ಗಿ ಅಸ್ತವ್ಯಸ್ತವಾಗಿತ್ತು.
ಪಾಲಕ್ಕಾಡ್ ಕಲ್ಲಡಿಕೋಡ್ ಎಂಬಲ್ಲಿ ಸಿಡಿಲು ಬಡಿದು ಮನೆಯ ಮೇಲ್ಛಾವಣಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಕರಿಂಬಾ ಅಯ್ಯಪ್ಪನಕೋಟ ಮಂಪುರಂ ನಿವಾಸಿ ಕಣ್ಣನ್ ಎಂಬವರ ಮನೆ ಬೆಂಕಿಗೆ ಆಹುತಿಯಾಗಿದೆ. ಮಂಪುರಂ ಮೂಲದ ರೆಗಿ ಮತ್ತು ಅವರ ಕುಟುಂಬ ಬಾಡಿಗೆಗೆ ಈ ಮನೆಯಲ್ಲಿ ವಾಸವಾಗಿದ್ದಾರೆ. ಮನೆಯಲ್ಲಿದ್ದ ಕಪಾಟುಗಳು, ಬೆಡ್‍ಗಳು ಇತ್ಯಾದಿಗಳು ಸುಟ್ಟು ಹೋಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು